ಏಪ್ರಿಲ್ 28 ರಿಂದ ಪ್ರಾರಂಭ ವಾಗಬೇಕಿದ್ದ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡಲಾಗಿದೆ
ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಈ ಕುರಿತಂತೆ ಪ್ರಕಟಣೆಯಲ್ಲಿ ಮಾಹಿತಿ ತಿಳಿಸಿ, ಹೆಚ್ಚುತ್ತಿರುವ ಕೊವಿಡ್ ಸೋಂಕಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.
ವಾರ್ಷಿಕ ಪರೀಕ್ಷೆಗಳು ಮುಗಿದ ಕೂಡಲೇ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಜನಪ್ರತಿನಿಧಿಗಳು, ಪೋಷಕರು ಮತ್ತು ಅಧಿಕಾರಿಗಳ ಜತೆ ಸುದೀರ್ಘ ಚರ್ಚೆ ನಡೆಸಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.
ವಿದ್ಯಾರ್ಥಿ ಹಿತ ಕಾಯಲು ಸರ್ಕಾರ ಬದ್ಧವಾಗಿದೆ.ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿರುವ ಕಾರಣ ವಿಚಲಿತರಾಗದೇ ಏಕಾಗ್ರತೆಯಿಂದ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆಯನ್ನು ಮುಂದುವರೆಸಬೇಕೆಂದು ಅವರು ಕಿವಿಮಾತು ಹೇಳಿದ್ದಾರೆ.
ಕೊರೊನಾ 2ನೇ ಅಲೆ ತೀವ್ರಗತಿಯಲ್ಲಿ ಹರಡುತ್ತಿರುವ ಕಾರಣ ಅನೇಕ ಪರೀಕ್ಷೆಗಳನ್ನು ಕೇಂದ್ರ ಸರ್ಕಾರವೇ ಮುಂದೂಡಿದೆ. ಆದರೆ ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಗಳನ್ನು ನಡೆಯಲಿದೆ ಎಂದು ಶಿಕ್ಷಣ ಸಚಿವರು ಹೇಳಿದ್ದಾರೆ.
- KRS ಡ್ಯಾಂನಿಂದ ಕೃಷಿಗೆ ನೀರು: ವೇಳಾಪಟ್ಟಿ ಪ್ರಕಟ
- BBMP ಕಚೇರಿಯಲ್ಲಿ ಇಡಿ ದಾಳಿ: 960 ಕೋಟಿ ರೂ. ಅಕ್ರಮ ತನಿಖೆ
- ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರಕ್ಕೆ ನಿಷೇಧ: ಈಶ್ವರ್ ಖಂಡ್ರೆ ಸ್ಪಷ್ಟನೆ
- ಭೂಕಂಪದ : ಟಿಬೆಟ್-ನೇಪಾಳ ಗಡಿಯಲ್ಲಿ 32 ಮಂದಿ ಸಾವು, 38 ಮಂದಿ ಗಾಯ
- ಭಾರತೀಯ ವಾಯುಪಡೆ: ಏರ್ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ
More Stories
ಅಮಿತ್ ಶಾ ಹೇಳಿಕೆ ವಿರೋಧಿಸಿ ಮೈಸೂರು-ಮಂಡ್ಯ ಬಂದ್: ವಾಹನ ಸಂಚಾರಕ್ಕೆ ಅಡಚಣೆ
ಕಾನ್ಸ್ಟೇಬಲ್ ನೇಮಕಾತಿ ದೈಹಿಕ ಪರೀಕ್ಷೆ: ಓಟದ ವೇಳೆ ಬಿದ್ದ ಯುವಕನ ದುರ್ಮರಣ
ಸಂಕ್ರಾಂತಿ ಬಳಿಕ ಬಸ್ ಟಿಕೆಟ್ ದರ ಏರಿಕೆ ಸಾಧ್ಯತೆ