5 ಮತ್ತು 8 ನೇ ತರಗತಿಯ ‘ಪಬ್ಲಿಕ್ ಪರೀಕ್ಷೆ’ ಮುಂದೂಡಿಕೆ

Team Newsnap
1 Min Read

5 ಮತ್ತು 8 ನೇ ತರಗತಿಯ ಪಬ್ಲಿಕ್ ಪರೀಕ್ಷೆ ರದ್ದುಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿತ್ತು.
ಹೈಕೋರ್ಟ್ ಆದೇಶ ಪ್ರಶ್ನಿಸಿ ಸರ್ಕಾರ ಮೇಲ್ಮನವಿ ಸಲ್ಲಿಸಿದ್ದು, ಈ ಬಗ್ಗೆ ಹೈಕೋರ್ಟ್ ಇಂದು ತುರ್ತು ವಿಚಾರಣೆ ನಡೆಸಿದೆ .

ಮಾ.13 ರಂದು ನಡೆಯಬೇಕಿದ್ದ 5 ಮತ್ತು 8 ನೇ ತರಗತಿಯ ಪಬ್ಲಿಕ್ ಪರೀಕ್ಷೆ ಮುಂದೂಡಲಾಗುವುದು ಎಂದು ರಾಜ್ಯ ಸರ್ಕಾರ ಹೇಳಿದೆ. ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದ್ದು, ಮಾ.14 ಕ್ಕೆ ಹೈಕೋರ್ಟ್ ವಿಚಾರಣೆ ಮುಂದೂಡಿದೆ.

ಈ ಬಾರಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ರಾಜ್ಯದ 5ನೇ ತರಗತಿ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯನ್ನು ನಡೆಸಲು ನಿರ್ಧರಿಸಿತ್ತು, ಆದರೆ ನಿನ್ನೆ ಹೈಕೋರ್ಟ್ ಏಕಸದಸ್ಯ ಪೀಠ ಬೋರ್ಡ್ ಪರೀಕ್ಷೆ ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಮುಂದಿನ ವರ್ಷದಿಂದ ಪರೀಕ್ಷೆ ನಡೆಸಬಹುದು, ಮುಂದಿನ ವರ್ಷದಿಂದ ಆಯಾ ನಿಯಮಗಳಿಗನುಸಾರವಾಗಿ ಪರೀಕ್ಷೆ ನಡೆಸಬಹುದು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.ರಾಜ್ಯ ವಿಧಾನ ಸಭಾ ಚುನಾವಣೆ – ಕೇಂದ್ರ ಚು. ಆಯೋಗದ ಭರದ ಸಿದ್ದತೆ: ರಾಜೀವ್ ಕುಮಾರ್

Share This Article
Leave a comment