ಫೆಬ್ರವರಿ 14ಕ್ಕೆ ನಿಗದಿಯಾಗಿರುವ ಪಂಜಾಬ್ ವಿಧಾನಸಭೆ ಚುನಾವಣೆಯನ್ನು ಮುಂದೂಡುವಂತೆ ಹಲವು ರಾಜಕೀಯ ಪಕ್ಷಗಳು ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಮಾಡಿಕೊಂಡಿವೆ.
ಈ ಸಂಬಂಧ ಮುಖ್ಯಮಂತ್ರಿ ಚರಣ್‍ಜಿತ್ ಎಸ್ ಚನ್ನಿ ಚುನಾವಣಾ ಆಯೋಗಕ್ಕೆ ವಿಸ್ತೃತ ಪತ್ರ ಬರೆದಿದ್ದಾರೆ.
ಪಂಜಾಬ್ ನಲ್ಲಿ ಫೆ.16 ರಂದು ಗುರು ರವಿದಾಸ್ ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ.
ಶೇ 32 ರಷ್ಡು ಮತದಾರರಿರುವ ಪರಿಶಿಷ್ಟ ಜಾತಿಯ ಸಮುದಾಯ ಈ ಜನ್ಮದಿನವನ್ನು ವಿಶೇಷ ಆಚರಿಸುತ್ತದೆ. ಇದಕ್ಕಾಗಿ ಅವರು ಫೆಬ್ರವರಿ 10ರಿಂದ 16 ವರೆಗೂ ಉತ್ತರಪ್ರದೇಶದ ವಾರಣಾಸಿಗೆ ತೆರಳುತ್ತಾರೆ.
ಫೆಬ್ರವರಿ 14 ರಂದು ಮತದಾನಕ್ಕೆ ದಿನಾಂಕ ನಿಗದಿಯಾಗಿದೆ ಈ ಅವಧಿಯಲ್ಲಿ ಪಂಜಾಬ್‍ನಲ್ಲಿ ಪರಿಶಿಷ್ಠ ಜಾತಿಯ ಜನರು ಅನುಪಸ್ಥಿತಿಯಲ್ಲಿರಲಿದ್ದಾರೆ. ದೊಡ್ಡ ಪ್ರಮಾಣದ ಮತದಾರರ ಅನುಪಸ್ಥಿತಿಯಲ್ಲಿ ಮತದಾನ ನಡೆಸುವುದು ಸೂಕ್ತವಲ್ಲ ಎಂದು ತಮ್ಮ ಪತ್ರದಲ್ಲಿ ಚನ್ನಿ ಹೇಳಿದ್ದಾರೆ. ಈ ಹಿನ್ನಲೆ ಫೆಬ್ರವರಿ 14 ರಂದು ನಿಗದಿಯಾಗಿರುವ ಮತದಾನದ ದಿನಾಂಕವನ್ನು ಮುಂದೂಡಬೇಕು, ಇದಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಮತ ಕೂಡಾ ಇದೆ ಎಂದು ವಿವರಿಸಿದ್ದಾರೆ.
ಚುನಾವಣೆ ಮುಂದೂಡಿಕೆ ಮನವಿ ಹಿನ್ನೆಲೆ ಇಂದು ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಲಿದೆ, ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಸಭೆ ನಡೆಸಲಿದ್ದಾರೆ.
ಈ ಸಭೆಯಲ್ಲಿ ಚುನಾವಣೆ ಮುಂದೂಡಿಕೆ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದೆ ಮಧ್ಯಾಹ್ನದ ಬಳಿಕ ಅಧಿಕೃತ ಆದೇಶ ಹೊರ ಬರುವ ನಿರೀಕ್ಷೆಗಳಿದೆ.
- ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
- ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
- ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ
- ಡಿ.ಕೆ. ಸುರೇಶ್ ತಂಗಿ ಎಂದು ಹೇಳಿಕೊಂಡು 8.41 ಕೋಟಿ ಚಿನ್ನಾಭರಣ ವಂಚನೆ: ಎಫ್ಐಆರ್ ದಾಖಲು
- ಮುಡಾ ಹಗರಣ: ಬದಲಿ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ, ತನಿಖಾ ವರದಿ ಆಧರಿಸಿ ಸರ್ಕಾರದ ಕ್ರಮ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ