ವಿದ್ಯುತ್ ಖರೀದಿ : ಕೆ.ಜೆ.ಜಾರ್ಜ್

Team Newsnap
1 Min Read

ನವದೆಹಲಿ: ವಿದ್ಯುತ್ ಕೊರತೆ ನೀಗಿಸಲು ಬೇರೆ ರಾಜ್ಯಗಳ ಜೊತೆ ಮಾತನಾಡುತ್ತಿದ್ದೇವೆ. ವಿದ್ಯುತ್ ಸಮಸ್ಯೆ ಆಗಿರುವದಕ್ಕೆ ಬಿಜೆಪಿ ಕಾರಣ.

ಕಳೆದ 4 ವರ್ಷಗಳ ಬಿಜೆಪಿ ಆಡಳಿತದಲ್ಲಿ ವಿದ್ಯುತ್ ಉತ್ಪಾದನೆ ಹೆಚ್ಚಿಸುವ ಯಾವ ಕೆಲಸವನ್ನೂ ಮಾಡಲಿಲ್ಲ. ನಮ್ಮ ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಇಂಧನ ಉತ್ಪಾದನೆಯನ್ನು ಹೆಚ್ಚು ಮಾಡಿದ್ದೆವು.

ಆದರೆ ಬಿಜೆಪಿಯವರು 4 ವರ್ಷ ನಿದ್ದೆ ಮಾಡಿದ ಸಲುವಾಗಿ ಇಂದು ನಮಗೆ ವಿದ್ಯುತ್ ಕೊರತೆ ಆಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಆರೋಪಿಸಿದರು.ಬೆಂಗಳೂರಿನ ಮಾಜಿ ಕಾರ್ಪೋರೇಟರ್ ಪ್ಲ್ಯಾಟ್ ನಲ್ಲಿ 42 ಕೋಟಿ ರು ಸೀಜ್ ಮಾಡಿದ ಐಟಿ ಅಧಿಕಾರಿಗಳು

ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ಕೆ.ಜೆ. ಜಾರ್ಜ್, ವಿದ್ಯುತ್ ಕೊರತೆ ನೀಗಿಸಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಾರ್ಯಪ್ರವೃತ್ತವಾಗಿದೆ. ಬೇರೆ ರಾಜ್ಯದಿಂದ ವಿದ್ಯುತ್ ಖರೀದಿ ಮಾಡಿ ಜನರಿಗೆ ನೀಡಲಾಗುವುದು ಎಂದು ಹೇಳಿದರು.

Share This Article
Leave a comment