ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬವನ್ನು ಅಭಿಮಾನಿಗಳು ರಾಜ್ಯಾದ್ಯಂತ ಆಚರಿಸುತ್ತಿದ್ದಾರೆ. ಅಪ್ಪು ಪುಣ್ಯಭೂಮಿಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 6ರ ತನಕ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ, ಅಭಿಮಾನಿಗಳು ಹಲವು ರೀತಿಯಲ್ಲಿ ನೆಚ್ಚಿನ ನಟನ ಹುಟ್ಟು ಹಬ್ಬವನ್ನು ಆಚರಿಸುತ್ತಿದ್ದಾರೆ.
ರಾಜ್ಯದ ನಾನಾ ಕಡೆಗಳಲ್ಲಿ ಅಪ್ಪು ಪುತ್ಥಳಿ ಅನಾವರಣ, ಅನ್ನ ಸಂತರ್ಪಣೆ, ಅನಾಥಾಶ್ರಮದಲ್ಲಿ ಹುಟ್ಟು ಹಬ್ಬ ಸೇರಿದಂತೆ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಧಾರವಾಡದಲ್ಲಿ ಅಪ್ಪು ಹೆಸರಿನಲ್ಲೇ ಚಂದ್ರಶೇಖರ್ ಮಾಡಲಗೇರಿ ಮತ್ತು ತಂಡ ಚಿತ್ರೋತ್ಸವವನ್ನು ಆಯೋಜನೆ ಮಾಡಲಾಗಿದೆ. ಮೂರು ದಿನಗಳ ಕಾಲ ಅಪ್ಪು ಹೆಸರಿನಲ್ಲೇ ಈ ಚಿತ್ರೋತ್ಸವ ನಡೆಯಲಿದೆ. ಅಪ್ಪು ಹೆಸರಿನಲ್ಲಿ ಪ್ರಶಸ್ತಿಗಳನ್ನೂ ನೀಡಲಾಗುತ್ತಿದೆ.
ಸಂಜೆ 6 ಗಂಟೆಗೆ ಅಪ್ಪು ಹಿಟ್ ಹಾಡುಗಳ ಸಂಗೀತ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಡಾ.ರಾಜ್ ಕುಟುಂಬದ ಅನೇಕ ಸದಸ್ಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಅನುಮತಿ ಇಲ್ಲದೆ ಅಧಿಕಾರಿಗಳ ವರ್ಗಾವಣೆ ಬೇಡ : ಚು.ಆಯೋಗ
ಪುನೀತ್ ಅವರ ಹುಟ್ಟು ಹಬ್ಬದ ದಿನದಂದೆ ಆರ್.ಚಂದ್ರು ನಿರ್ದೇಶನದ ಉಪೇಂದ್ರ, ಸುದೀಪ್ ಮತ್ತು ಶಿವರಾಜ್ ಕುಮಾರ್ ಕಾಂಬಿನೇಷನ್ ನ ಕಬ್ಜ ಚಿತ್ರ ರಿಲೀಸ್ ಆಗಿದೆ. ಬಿಡುಗಡೆಯಾದ ಅಷ್ಟೂ ಚಿತ್ರಮಂದಿರಗಳಲ್ಲೂ ಅಪ್ಪು ಕಟೌಟ್ ಹಾಕಿದೆ ಚಿತ್ರತಂಡ. ಬಿಡುಗಡೆಯಾದ ಅಷ್ಟೂ ಚಿತ್ರಮಂದಿರಗಳಲ್ಲೂ ಅಪ್ಪು ಕಟೌಟ್ ಹಾಕಿದೆ ಚಿತ್ರತಂಡ. ಜೊತೆಗೆ ಇಂದು ಪುನೀತ್ ನಟನೆಯ ಯುವರತ್ನ ಸಿನಿಮಾದ ಉಚಿತ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ.
- ನಕ್ಸಲ್ ನಾಯಕ ವಿಕ್ರಂ ಗೌಡ ಎನ್ಕೌಂಟರ್: ಗೃಹಸಚಿವ ಪರಮೇಶ್ವರ್ ದೃಢೀಕರಣ
- ಜಲಗಾರ ಮತ್ತು ಕಾಲ ಜ್ಞಾನಿ ಕನಕ ನಾಟಕಗಳಲ್ಲಿ ದೈವ-ದೇಗುಲ ಸಂಕಥನ
- ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
- ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
More Stories
ತಂದೆಯಾದ ಅಭಿಷೇಕ್: ಮರಿ ರೆಬಲ್ ಸ್ಟಾರ್ ಗೆ ಜನ್ಮ ನೀಡಿದ ಅವಿವಾ
ಬಿಗ್ಬಾಸ್ ನಿರೂಪಣೆಗೆ ಸುದೀಪ್ ವಿದಾಯ: ಕಿಚ್ಚನ ಅಧಿಕೃತ ಘೋಷಣೆ!
ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಹರ್ಷಿಕಾ ಪೂಣಚ್ಚ