December 25, 2024

Newsnap Kannada

The World at your finger tips!

cm s

ಪ್ರಜ್ವಲ್ ಪ್ರಕರಣ : ಸಿಬಿಐಗೆ ವಹಿಸಲ್ಲ – ಸಿಎಂ ಸಿದ್ದು

Spread the love
  • ನಮ್ಮ ಪೋಲಿಸರು ಸಮರ್ಥರಿದ್ದಾರೆ
  • ⁠ಬಿಜೆಪಿಯವರು ಯಾವತ್ತಾದರೂ ಸಿಬಿಐ ತನಿಖೆ ಕೊಟ್ಟಿದ್ದಾರಾ ?

ಬೆಂಗಳೂರು : ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ನನಗೆ ನಮ್ಮ ಪೊಲೀಸರ ಬಗ್ಗೆ ವಿಶ್ವಾಸವಿದೆ. ಅವರು ಕಾನೂನು ರೀತ್ಯ ಸಮರ್ಥವಾಗಿ ತನಿಖೆ ನಡೆಸಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ,ಬಿಜೆಪಿಯವರು ಯಾವತ್ತಾದರೂ ಒಂದು ಪ್ರಕರಣವಾದರೂ ಸಿಬಿಐಗೆ ಕೊಟ್ಟಿದ್ದಾರಾ? ಎಂದು ಖಾರವಾಗಿ ಪ್ರಶ್ನೆ ಮಾಡಿದರು.

ಈ ಹಿಂದೆ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಡಿ.ಕೆ. ರವಿ ಪ್ರಕರಣ, ಒಂದಂಕಿ ಲಾಟರಿ ಪ್ರಕರಣ, ಸಚಿವರಾದ ಕೆ.ಜೆ. ಜಾರ್ಜ್‌ ಅವರ ಮೇಲಿನ ಆರೋಪ, ಪರೇಶ್‌ ಮೇಸ್ತಾ ಸಾವಿನ ಪ್ರಕರಣಗಳನ್ನು ಸಿಬಿಐಗೆ ವಹಿಸಲಾಗಿತ್ತು.
ಆದರೆ ಬಿಜೆಪಿಯವರೇ ಸಿಬಿಐ ಯನ್ನು ಕರಪ್ಷನ್‌ ಬ್ಯೂರೋ ಆಫ್‌ ಇನ್ವೆಸ್ಟಿಗೇಷನ್ ಎಂದು ಬಣ್ಣಿಸಿದ್ದಾರೆ. ದೇವೇಗೌಡರು ಚೋರ್‌ ಬಚಾವೋ ಸಂಸ್ಥೆ ಎಂದು ಹೇಳಿದ್ದರು. ಈಗ ಸಿಬಿಐ ಮೇಲೆ ಅವರಿಗೆ ವಿಶ್ವಾಸ ಬಂತಾ? ಎಂದು ಮರು ಪ್ರಶ್ನಿಸಿದರು.

ನನಗೆ ಸಿಬಿಐ ಮೇಲೆ ವಿಶ್ವಾಸವಿದೆ. ಆದರೆ, ನಮ್ಮ ಪೊಲೀಸರ ಬಗ್ಗೆ ಹೆಚ್ಚು ನಂಬಿಕೆ ಇದೆ. ಅದಕ್ಕಾಗಿ ವಿಶೇಷ ತನಿಖಾ ತಂಡ ರಚನೆ ಮಾಡಿದ್ದೇವೆ.

ನಮ್ಮ ಸರ್ಕಾರ ಕಾನೂನು ರೀತ್ಯ ನಡೆಯುತ್ತಿರುವ ಕೆಲಸದಲ್ಲಿ, ತನಿಖೆಯಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಅವರು ಸರಿಯಾದ ರೀತಿಯಲ್ಲಿ ಕೆಲಸ ಮಾಡುತ್ತಾರೆಂದು ನಂಬಿದ್ದೇನೆ. ನಾನು ಯಾವತ್ತೂ ಕಾನೂನಿಗೆ ವಿರುದ್ಧವಾಗಿ ಕೆಲಸ ಮಾಡಿ ಎಂದು ಹೇಳಿಲ್ಲ, ಹೇಳುವುದೂ ಇಲ್ಲ. ಈ ಪ್ರಕರಣದಲ್ಲಿ ಅಂತರರಾಷ್ಟ್ರೀಯ ಮಟ್ಟದ ತನಿಖೆಯ ಅಗತ್ಯವಿಲ್ಲ. ಎಲ್ಲ ಅಪರಾಧ ಪ್ರಕರಣಗಳ ತನಿಖೆ ಯಾರು ಮಾಡುತ್ತಾರೆ? ನಮ್ಮ ಪೊಲೀಸರಲ್ಲವೇ? ಅವರದ್ದೇ ವಿಶೇಷ ತನಿಖಾದಳ ರಚಿಸಿರುವುದಲ್ಲವೇ? ನಮ್ಮ ಪೊಲೀಸರನ್ನು ನಾವು ನಂಬಬೇಕಲ್ಲವೆ?ಕೊಡಗು: ಬಾಲಕಿಯನ್ನು ಭೀಕರ ಹತ್ಯೆಗೈದ ಆರೋಪಿ ಆತ್ಮಹತ್ಯೆ

ಪ್ರಜ್ವಲ್ ರೇವಣ್ಣನವರ ಮಹಿಳಾ ದೌರ್ಜನ್ಯ ಪ್ರಕರಣದಲ್ಲಿ ನಾನಾಗಲೀ, ಡಿ.ಕೆ.ಶಿವಕುಮಾರ್‌ ಆಗಲೀ, ಸರ್ಕಾರದ ಯಾರೊಬ್ಬರೂ ಹಸ್ತಕ್ಷೇಪ ಮಾಡುತ್ತಿಲ್ಲ. ನನಗೆ ಎಸ್.ಐ.ಟಿ. ಮೇಲೆ ವಿಶ್ವಾಸವಿದೆ. ಸತ್ಯಾಸತ್ಯತೆ ಹೊರಬರುವ ನಂಬಿಕೆ ಇದೆ.

Copyright © All rights reserved Newsnap | Newsever by AF themes.
error: Content is protected !!