ಬೆಂಗಳೂರು: ಅತ್ಯಾಚಾರ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಪ್ರಜ್ವಲ್ ರೇವಣ್ಣ ಒಂದು ಪ್ರಕರಣದಲ್ಲಿ ಜಾಮೀನು ಮತ್ತು ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠವು ಇಂದು ಈ ಮೂರು ಅರ್ಜಿಗಳನ್ನು ವಜಾಗೊಳಿಸಿದೆ.
ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಕೋರಿದ್ದರೆ, ಸಿಐಡಿ ಸೈಬರ್ ಸೆಲ್ ನಲ್ಲಿ ದಾಖಲಾಗಿರುವ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದರು.ಇದನ್ನು ಓದಿ –ಪೊಲೀಸರ ಮಕ್ಕಳಿಗಾಗಿ ರಾಜ್ಯದಲ್ಲಿ 7 ಪಬ್ಲಿಕ್ ಶಾಲೆಗಳ ಸ್ಥಾಪನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಪ್ರಜ್ವಲ್ ರೇವಣ್ಣ ಅವರು ಕಳೆದ ನಾಲ್ಕು ತಿಂಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ