ಹುಬ್ಬಳ್ಳಿಧ್ವನಿವರ್ಧಕ ಬಳಕೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಆದೇಶ ಪಾಲಿಸಿದವರ ಮೇಲೆ ನಾನೇ ಗುಂಡಿಟ್ಟು ಹೊಡೀತೇನೆ ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.ಹುಬ್ಬಳ್ಳಿಯಲ್ಲಿ ಮಾತನಾಡಿದ ಮುತಾಲಿಕ್ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುಪ್ರೀಂಕೋರ್ಟ್ ಅದೇಶ ಪಾಲನೆ ಮಾಡದವರ ಬಗ್ಗೆ ಕ್ರಮ ಯಾಕೆ ಕೈಗೊಳ್ಳುತ್ತಿಲ್ಲ. ನಿಮಗೆ ಸರ್ಕಾರ ನಡೆಸಲು ಆಗದಿದ್ದರೆ ನನಗೆ ಕೊಡಿ. ಹೇಗೆ ಸರ್ಕಾರ ನಡೆಸಬೇಕು ಅನ್ನೊದನ್ನ ತೋರಿಸುತ್ತೇನೆ. ಸುಪ್ರೀಂ ಕೋರ್ಟ್ ಆದೇಶ ಪಾಲನೆ ಮಾಡದವರ ಮೇಲೆ ಗುಂಡು ಹಾಕುತ್ತೇನೆ. ನನ್ ಕೈಯಲ್ಲಿ ಸರ್ಕಾರ ಕೊಡಿ, ಗುಂಡು ಹೊಡೀತೀನಿ. ನೀವ್ ಯಾಕೆ ಬಾಯಿ ಮುಚ್ಚಿಕೊಂಡು ಕುಳಿತುಕೊಂಡಿದ್ದೀರಿ.
ಇದನ್ನು ಓದಿ – ಕಾಶ್ಮೀರದ ಕುಲ್ಗಾಮ್ ನಲ್ಲಿ ಹಿಂದೂ ಬ್ಯಾಂಕ್ ಮ್ಯಾನೇಜರ್ ಹತ್ಯೆ ಮಾಡಿದ ಉಗ್ರರು
ಸರ್ಕಾರ ನಮ್ಮ ಸುಪ್ರಭಾತಕ್ಕೆ ಅಡ್ಡಿಪಡಿಸುವ ಕೆಲಸ ಮಾಡಿದ್ರು. ದೇವಸ್ಥಾನಗಳಿಗೆ ತೆರಳಿ- ಸುಪ್ರಭಾತ ಹಾಕದಂತೆ ಧಮ್ಕಿ ಹಾಕಿದ್ದಾರೆ. ಸರ್ಕಾರದ ಸೊಕ್ಕು ಅಡಗಿಸುವ ತನಕ ನಮ್ಮ ಹೋರಾಟ ಮುಂದುವರೆಯುತ್ತೆ.ಇವತ್ತಿಗೂ ಮಸೀದಿ ಮೈಕ್ ಗಳಿಂದ ಶಾಲೆ, ಕಾಲೇಜು, ಆಸ್ಪತ್ರೆಯ ಎಲ್ಲದಕ್ಕೂ ತೊಂದರೆ ಆಗುತ್ತಿದೆ.ಸರ್ಕಾರ ನಿಯಮ ಇನ್ನೂ ಉಲ್ಲಂಘನೆ ಆಗುತ್ತಿದೆ. ಸರ್ಕಾರದ ಅದೇಶ ಕಸದ ಬುಟ್ಟಿಗೆ ಎಸೆಯಲಾಗಿದೆ.
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯ ನಾಥ್ ಕಾರ್ಯವೈಖರಿಯನ್ನು ಬೊಮ್ಮಾಯಿ ಅಳವಡಿಸಿಕೊಳ್ಳಬೇಕು. ನಾವು ರಕ್ತ ಸುರಿಸಿ ಬಿಜೆಪಿ ಕಟ್ಟಿದ್ದೇವೆ. ರಾಜಕೀಯ ಈಗ ಮಾತನಾಡುವುದಿಲ್ಲ ನಮ್ಮ ಶ್ರಮದಿಂದ ನೀವು ಅಧಿಕಾರ ಅನುಭವಿಸುತ್ತಿದ್ದೀರಿ. ಬೊಮ್ಮಾಯಿ ಅಧಿಕಾರಕ್ಕೆ ಬಂದಾಗ ಖುಷಿ ಪಟ್ಟಿದ್ದೆವು. ಆದ್ರೆ ಇದೀಗ ತೀವ್ರ ನಿರಾಸೆಯಾಗಿದೆ.
ಕಾಶ್ಮೀರದಲ್ಲಿರೋ ಹಿಂದೂಗಳಿಗೆ ಕೇಂದ್ರ ಸರ್ಕಾರ ಸಂಪೂರ್ಣ ರಕ್ಷಣೆ ನೀಡಬೇಕು. ಕೇವಲ ಕಾಶ್ಮೀರಿ ಫೈಲ್ಸ್ ಸಿನೆಮಾ ತೋರಿಸಿ ನಾಟಕ ಮಾಡಿದ್ರೆ ನಡೆಯೋಲ್ಲ. ಕಾಶ್ಮೀರಿ ಫೈಲ್ಸ್ ಮತ್ತೆ ರಿಪೀಟ್ ಆಗ್ತಿದ್ದು, ಅದಕ್ಕೇನು ಮಾಡುತ್ತಿದ್ದೀರಿ. ಇದೇ ರೀತಿ ಹಿಂದೂಗಳ ಮೇಲರ ದಾಳಿಗಳು ಮುಂದುವರಿದರಿ ಚಲೋ ಕಾಶ್ಮೀರ ಹೋರಾಟ ಮಾಡ್ತೇವೆ.
More Stories
ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು