ಭಾರತರತ್ನ, ಮಾಜಿ ರಾಷ್ಟ್ರ ಪತಿ ಪ್ರಣಬ್ ಮುಖರ್ಜಿ ವಿಧಿವಶ


ಭಾರತ ರತ್ನ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ (84) ನವದೆಹಲಿಯಲ್ಲಿ ಸೋಮವಾರ ವಿಧಿವಶರಾದರು.
ಕಾಂಗ್ರೆಸ್ ಕಟ್ಟಾಳು ಎಂದೇ ಖ್ಯಾತಿಯಾಗಿ ಪಕ್ಷ ಏಳಿಗೆಗೆ ಸಾಕಷ್ಟು ಶ್ರಮಿಸಿದ್ದ ಪ್ರಣಬ್ ದೇಶದ ಉನ್ನತ ಹುದ್ದೆಗಳನ್ನು ಅಲಂಕರಿಸಿ, ಶಿಸ್ತಿನಿಂದ ಆಡಳಿತ ನಡೆಸಿದರು.

ತಮ್ಮ ತಂದೆ  ಪ್ರಣಬ್ ಮುಖರ್ಜಿ ದೆಹಲಿಯ ಸೇನಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಎಂದು ಪುತ್ರ ಅಭಿಜಿತ್ ತಿಳಿಸಿದರು. 2012 ರಿಂದ 2017 ರವರೆಗೆ ರಾಷ್ಟ್ರಪತಿಯಾಗಿ ದೇಶ ಸೇವೆ ಮಾಡಿದ ಪ್ರಣಬ್ ಮೆದುಳಿನ ರಕ್ತ ಸ್ರಾವದಿಂದ ಬಳಲುತ್ತಿದ್ದರು. ಅಲ್ಲದೇ ಕೊರೋನಾ ಪಾಸಿಟಿವ್ ಪತ್ತೆಯಾದ ನಂತರ ಉಸಿರಾಟದ ತೊಂದರೆಯೂ ಆಗಿತ್ತು.
ಪಶ್ಚಿಮ ಬಂಗಾಲ ರಾಜ್ಯದ ಪ್ರಣಬ್, ಇಂದಿರಾ ಗಾಂಧಿಗೆ ಪರಮ ಆಪ್ತರಾಗಿದ್ದರು. 1969 ರಲ್ಲಿ ಮೊದಲ ಬಾರಿ ರಾಜ್ಯಸಭೆಗೆ ಆಯ್ಕೆಯಾಗುವ ಮೂಲಕ ರಾಜಕೀಯ ಪ್ರವೇಶ ಮಾಡಿದ್ದರು. ಕಾಂಗ್ರೆಸ್ ಪಕ್ಷದ ಬಹು ದೊಡ್ಡ ಮುತ್ಸದ್ಧಿ ರಾಜಕಾರಣಿ ಎಂದೇ ಗುರುತಿಸಿಕೊಂಡಿದ್ದ ಪ್ರಣಬ್, ಕಾಂಗ್ರೆಸ್ ಪಕ್ಷದಲ್ಲಿ ಎಂತಹ ಬಿರುಗಾಳಿ ಎದ್ದಾಗಲೂ ಸಮಸ್ಯೆಗಳನ್ನು ಬೆಣ್ಣೆಯಲ್ಲಿ ಕೂದಲು ತೆಗೆದ ಮಾದರಿಯಲ್ಲಿ ಪರಿಹಾರ ಮಾಡಿರುವ ಉದಾಹರಣೆಗಳು ಇವೆ. 2019 ರಲ್ಲಿ ಬಿಜೆಪಿ ಸಕರ್ಾರವು ಪ್ರಣಬ್ ರಾಜಕೀಯ ಸೇವೆ ಪರಿಗಣಿಸಿ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ. ಮಾಜಿ ರಾಷ್ಟ್ರಪತಿ ನಿಧನಕ್ಕೆ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್ ಸೇರಿದಂತೆ ಅನೇಕ ಗಣ್ಯರು ಕಂಬನಿ ಮಿಡಿದ್ದಾರೆ.

Team Newsnap
Leave a Comment

View Comments

  • ಪರಮಾತ್ಮನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ 🙏🙏

  • ಅವರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ದೇವರು ಅವರ ಕುಟುಂಬಕ್ಕೆ ಅವರ ಅಗಲಿಕೆಯನ್ನು ಸಹಿಸಿಕೊಳ್ಳಲು ಧರ್ಯ ಮತ್ತ ವಿಶ್ವಾಸವನ್ನು ಕೊಡಲಿ..💐💐💐

Share
Published by
Team Newsnap
Tags: #president

Recent Posts

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024

ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು

ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More

May 4, 2024

ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್

ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More

May 4, 2024

ರೇವಣ್ಣ ಅಪಹರಣ ಕೇಸ್‌ : ಎಸ್‌ಐಟಿ ವಿಶೇಷ ತಂಡದಿಂದ 40 ಕಡೆ ರೇಡ್‌

ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್‌ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More

May 4, 2024