ಟಿಪ್ಪುವನ್ನು ಮೈಸೂರು ಹುಲಿ ಎಂದು ಹೇಳಲು ಒಂದೇ ಒಂದು ಕಾರಣ ಕೊಡಿ
ಟಿಪ್ಪುವನ್ನು ಮೈಸೂರು ಹುಲಿ ಎಂದು ಹೇಳಲು ಒಂದೇ ಒಂದು ಕಾರಣ ಕೊಡಿ ಎಂದಿದ್ದ ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಕಿಡಿಕಾರಿದರು,ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹಿಂದಿನ ಕಾಲದಲ್ಲಿ ಫೋಟೊಗ್ರಫಿ ಇತ್ತಾ. ಹುಲಿನ ಹೊಡೆಯೊಕೆ ಹೋಗಿರುವುದನ್ನ ಯಾರಾದ್ರು ಫೋಟೊ ತೆಗೆದಿದ್ದಾರಾ, ಹುಚ್ಚು ಮುಂಡೆದು ಪ್ರತಾಪ್ ಸಿಂಹಗೆ ಏನೂ ಗೊತ್ತಿಲ್ಲ , ಟಿಪ್ಪು ಬಗ್ಗೆ 70 ವರ್ಷದಿಂದ ಬರೆದುಕೊಂಡು ಬಂದಿದ್ದಾರೆ, ಚಿತ್ರದಲ್ಲಿ ಟಿಪ್ಪು ಸುಲ್ತಾನ್ ಅವರನ್ನು ಹುಲಿಯ ಜೊತೆ ತೋರಿಸಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿದರು.
ಯಡಿಯೂರಪ್ಪನನ್ನ ಹುಲಿಯಾ ಅಂತೀವಿ, ರಾಜಾಹುಲಿ ಅಂತೀವಿ. ಹಾಗಾದ್ರೆ ಅವರು ಕಾಡಿನಲ್ಲಿದ್ದರಾ? ಒಬ್ಬ ಸಂಸದರಾಗಿ ಏನು ಮಾತನಾಡಬೇಕೆಂಬ ಪ್ರಜ್ಞೆ ಇಲ್ಲ ಎಂದರು.
ಪಠ್ಯ ಪುಸ್ತಕ ಪರಿಷ್ಕರಣೆ ಬಗ್ಗೆ
ಮೈಸೂರು ಕುವೆಂಪು ಅವರ ನಾಡು. ಪುಟ್ಟಪ್ಪನವರ ಬಳಿ ನಾವೆಲ್ಲಾ ಪಾಠ ಕೇಳಿದ್ದೇವೆ. ಪುಟ್ಟಪ್ಪನವರ ಪುಸ್ತಕಗಳನ್ನು ತೆಗೆಯಲು ಹೊರಟಿದ್ದಾರೆ. ನಮ್ಮವ್ವ ಕರ್ನಾಟಕ ಮಾತೆ, ನಮ್ಮ ಅಜ್ಜಿ ಭಾರತ ಮಾತೆ. ಮೊದಲು ಅವ್ವನನ್ನು ನೋಡ್ಲಾ ಅಂದ್ರೆ ಅಜ್ಜಿ ನೋಡಕೆ ಹೊರಟವರೇ ಎಂದು ವ್ಯಂಗ್ಯವಾಡಿದರು.
ಪರಿಷತ್ ಟಿಕೆಟ್ ವಿಚಾರ
ಪರಿಷತ್ ಟಿಕೆಟ್ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಎಚ್‌ಡಿ ದೇವೇಗೌಡರು, ನಾನು, ಎಚ್‌ಡಿ ಕುಮಾರಸ್ವಾಮಿ ಚರ್ಚೆ ಮಾಡಿ ಟಿಕೆಟ್ ಕೊಟ್ಟಿದ್ದೇವೆ. ನಾನು ಯಾವುದೇ ಟಿಕೆಟ್ ಆಕಾಂಕ್ಷಿ ಅಲ್ಲ. ನಾನು ಬಡಿಸುವ ಸ್ಥಾನದಲ್ಲಿದ್ದೇನೆ. ಪಕ್ಷದ ಅಧ್ಯಕ್ಷನಾಗಿ ಕೊಡುವ ಕೆಲಸವಷ್ಟೇ ನನ್ನದು ಎಂದು ಹೇಳಿದರು.
ಬಿಜೆಪಿ ಸರ್ಕಾರಕ್ಕೆ 9 ತಿಂಗಳಷ್ಟೇ ಆಯಸ್ಸು. 9 ತಿಂಗಳ ಬಳಿಕ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬರುತ್ತೆ. ಎಚ್‌ಡಿ ಕುಮಾರಸ್ವಾಮಿ ಸಿಎಂ ಆಗ್ತಾರೆ ಎಂದರು.
ಇದನ್ನು ಓದಿ : ಮಂಗಳಮುಖಿ ಸರ್ಕಾರ ಸಿ.ಎಂ.ಇಬ್ರಾಹಿಂ ಹೇಳಿಕೆಗೆ ಜಾನಪದ ಆಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಬೇಸರ
ಅಷ್ಟಮಂಗಲ ಪ್ರಶ್ನೆ ವಿಚಾರ ಕುರಿತು
ಮುಂದಿನ ಬಾರಿ ಬಿಜೆಪಿ ಅಧಿಕಾರಕ್ಕೆ ಬರುತ್ತಾ ಅಂತಾ ಪ್ರಶ್ನೆ ಹಾಕಿ!
ಮಳಲಿ ಮಸೀದಿ ಬಗ್ಗೆ ಅಷ್ಟಮಂಗಲ ಪ್ರಶ್ನೆ ವಿಚಾರ ಕುರಿತು ಲೇವಡಿ ಮಾಡಿದ ಸಿಎಂ ಇಬ್ರಾಹಿಂ, ಮೊದಲು ಮುಂದಿನ ಬಾರಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತಾ ಅಂತ ಪ್ರಶ್ನೆ ಹಾಕಿ. ರಾಜ್ಯದಲ್ಲಿ ಏನಾಗುತ್ತೆ, ಮೋದಿ ಏನಾಗ್ತಾರೆ ಎಂದು ಪ್ರಶ್ನೆ ಹಾಕಿ ಎಂದರು.
- ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
- ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
- ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
- 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ: ಸಚಿವ ಚಲುವರಾಯಸ್ವಾಮಿ
- ಸಿಎಂ ಪತ್ನಿಯ ನಿವೇಶನ ಹಗರಣ: ದೂರು ಹಿಂಪಡೆಯಲು ಆಮಿಷ ನೀಡಿದ ಆರೋಪ
More Stories
ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ