December 23, 2024

Newsnap Kannada

The World at your finger tips!

MP,mandya,election

Sumaltha's entry into state politics? ರಾಜ್ಯ ರಾಜಕಾಣಕ್ಕೆ ಸುಮಲತಾ ಎಂಟ್ರಿ?

ಆ ಯಮ್ಮ ಏನೂ ಕೆಲಸ ಮಾಡುವುದಿಲ್ಲ: ಸುಮಲತಾ ವಿರುದ್ಧ ಸಿಂಹ ಗುಡುಗು

Spread the love

ಸಂಸದೆ ಸುಮಲತಾ ಕಾರ್ಯ ವೈಖರಿ ಬಗ್ಗೆ ಮೈಸೂರು ಸಂಸದ ಪ್ರತಾಪ್ ಸಿಂಹ ಟೀಕಿಸಿ ಮಾತನಾಡಿರುವ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಬೆಂಗಳೂರಿಗೆ ತೆರಳುವಾಗ ತಾಲ್ಲೂಕಿನ ಯಲಿಯೂರು ಗೇಟ್‌ ಬಳಿ ಬೆಂಗಳೂರು–ಮೈಸೂರು ದಶಪಥ ಕಾಮಗಾರಿಯ ಬಗ್ಗೆ ಅಧಿಕಾರಿಯೊಬ್ಬರ ಜೊತೆ ಅವರು ಫೋನ್‌ನಲ್ಲಿ ಮಾತನಾಡಿದ್ದಾರೆ.

dab02913 8222 4d05 af2f 8dbfa3951112

‘ದೇವೇಗೌಡರ ಕುಟುಂಬವನ್ನು ಸೋಲಿಸುವ ಉದ್ದೇಶದಿಂದ ಸುಮಲತಾ ಅವರನ್ನು ಗೆಲ್ಲಿಸಿದ್ದಾರೆ. ಅವರು ಯಾವ ಕೆಲಸ ಮಾಡುವುದಕ್ಕೂ ಬಿಡುವುದಿಲ್ಲ. ಮಂಡ್ಯದ ಯಾವುದೇ ಕೆಲಸ ಇದ್ದರೂ ನನಗೆ ಹೇಳಿ. ಆ ಯಮ್ಮ ಏನೂ ಕೆಲಸ ಮಾಡುವುದಿಲ್ಲ’ ಎಂದು ಫೋನ್ ನಲ್ಲಿ ಮಾತನಾಡಿದ್ದಾರೆ.

ಪ್ರತಾಪ್ ಸಿಂಹ ಬೆಂಗಳೂರು- ಮೈಸೂರು ದಶಪಥ ಕಾಮಗಾರಿಯ ಯೋಜನಾಧಿಕಾರಿ ಜೊತೆ ಮಾತನಾಡಿದ್ದಾರೆ. ಸುಮಲತಾ ವಿರುದ್ಧ ಅಧಿಕಾರಿ ದೂರು ಹೇಳಿದಾಗ ಪ್ರತಾಪ್ ಸಿಂಹ, ಸುಮಲತಾ ವಿರುದ್ಧವೇ ಮಾತನಾಡಿದ್ದಾರೆ ಎಂದು ಸುಮಲತಾ ಬೆಂಬಲಿಗರು ತಿಳಿಸಿದ್ದಾರೆ.

‘ಕಾಮಗಾರಿಯಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರವನ್ನು ಸುಮಲತಾ ಪ್ರಶ್ನಿಸಿದ್ದರು. ಇದರ ಬಗ್ಗೆ ಯೋಜನಾಧಿಕಾರಿ ಪ್ರತಾಪ್ ಸಿಂಹ ಅವರಿಗೆ ದೂರು ನೀಡಿದಾಗ ಅವರು ನಮ್ಮ ಸಂಸದೆ ವಿರುದ್ಧ ಅವಹೇಳನಾಕಾರಿಯಾಗಿ ಮಾತನಾಡಿದ್ದಾರೆ. ಪ್ರತಾಪ್‌ ಸಿಂಹ ಅವರು ತಮ್ಮ ಕ್ಷೇತ್ರದ ಸಮಸ್ಯೆ ನೋಡಿಕೊಳ್ಳಲಿ, ನಮ್ಮ ಕ್ಷೇತ್ರದ ಸಮಸ್ಯೆ ಬಗೆಹರಿಸಲು ಅವರು ಬಾರದಿರುವುದೇ ಒಳ್ಳೆಯದು’ ಎಂದು ಸುಮಲತಾ ಬೆಂಬಲಿಗ ಸೋಮಶೇಖರ್ ತಿಳಿಸಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!