ಸರ್ಕಾರಿ ಅಧಿಕಾರಿ ಪ್ರತಿಮಾ ಕೊಲೆ : ತಪ್ಪೊಪ್ಪಿಕೊಂಡ ಕಾರು ಚಾಲಕ ಕಿರಣ್

Team Newsnap
1 Min Read

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕಿ ಪ್ರತಿಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಚಾಲಕ ಕಿರಣ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಕೆಲಸದಿಂದ ತೆಗೆದುಹಾಕಿದ್ದಕ್ಕೆ ಸರ್ಕಾರಿ ಅಧಿಕಾರಿ ಪ್ರತಿಮಾರನ್ನು ಕೊಲೆ ಮಾಡಿದ್ದೇನೆ ಎಂದು ವಿಚಾರಣೆ ವೇಳೆ ಬಂಧಿತ ಆರೋಪಿ ಮಾಜಿ ಕಾರು ಚಾಲಕ ಕಿರಣ್ ತಪ್ಪೊಪ್ಪಿಕೊಂಡಿದ್ದಾನೆ.

4 ವರ್ಷದಿಂದ ಗುತ್ತಿಗೆ ಆಧಾರದಲ್ಲಿ ಪ್ರತಿಮಾ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ. ನಂತರ ಈತ ಕಾರು ಅಪಘಾತ ಮಾಡಿದ್ದನು, ನಂತರ ಪ್ರತಿಮಾ ನನಗೆ ವಿನಾಕಾರಣ ಬೈಯುತ್ತಿದ್ದರು. ಕೆಲಸ ಬಿಟ್ಟು ಹೋಗುವಂತೆ ಹೇಳುತ್ತಿದ್ದರು ಎಂದಿದ್ದಾನೆ.

ಪ್ರತಿಮಾ ರೇಡ್ ಗೆ ಹೋಗುವ ವಿಚಾರ ಕಿರಣ್ ಗೆ ಗೊತ್ತಾಗುತ್ತಿತ್ತು, ಇದನ್ನು ಈತ ಲೀಕ್ ಮಾಡುತ್ತಿದ್ದನು. ಈ ಕಾರಣಕ್ಕೆ ಪ್ರತಿಮಾ ವಾರ್ನ್ ಕೂಡ ಮಾಡಿದ್ದರು ಎನ್ನಲಾಗಿದೆ. ಕೊಲೆ ನಡೆಯುವ ದಿನ ಪ್ರತಿಮಾ ಕಾಲಿಗೆ ಬಿದ್ದು ಕೆಲಸಕ್ಕೆ ಸೇರಿಸಿಕೊಳ್ಳುವಂತೆ ಬೇಡಿಕೊಂಡಿದ್ದನಂತೆ. ಆದರೆ ಪ್ರತಿಮಾ ಕೆಲಸಕ್ಕೆ ಸೇರಿಸಿಕೊಳ್ಳದ ಹಿನ್ನೆಲೆ ಹೊಂಚು ಹಾಕಿ ಪ್ರತಿಮಾರನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.

ಸುಬ್ರಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಕಲ್ಲಸಂದ್ರದಲ್ಲಿರುವ ಅವರ ನಿವಾಸದಲ್ಲಿ ಭಾನುವಾರ ಬೆಳಿಗ್ಗೆ 8.30 ರ ಸುಮಾರಿಗೆ ಕತ್ತು ಸೀಳಿದ ಸ್ಥಿತಿಯಲ್ಲಿ ಪ್ರತಿಮಾ ಕೆ.ಎಸ್ (45) ಅವರ ಶವ ಪತ್ತೆಯಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಯ ಪ್ರಕಾರ, ಮಹಿಳೆಯನ್ನು ಅವಳ ಕೋಣೆಯೊಳಗೆ ಕೊಲೆ ಮಾಡಲಾಗಿದೆ. ಪ್ರತಿಮಾಳನ್ನು ಮೊದಲು ಕತ್ತು ಹಿಸುಕಿ ನಂತರ ಅವರ ಕತ್ತು ಸೀಳಲಾಗಿದೆ.

Share This Article
Leave a comment