ಬೆಳಗಾವಿಯ ಕುವೆಂಪು ನಗರದಲ್ಲಿ 2015 ರ ಆಗಸ್ಟ್ ನಲ್ಲಿ ತಾಯಿ-ಇಬ್ಬರು ಮಕ್ಕಳ ತ್ರಿವಳಿ ಕಗ್ಗೊಲೆ ಪ್ರಕರಣದಲ್ಲಿ ಸ್ಯಾಕ್ಷಾಧಾರಗಳ ಕೊರತೆಯಿಂದ ಧಾರವಾಡ ಹೈಕೋರ್ಟ್ ಪೀಠ ಆರೋಪಿಯನ್ನು ಖಲಾಸೆ ಮಾಡಿದೆ.
ಇದನ್ನು ಓದಿ –ಮಂಡ್ಯ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ : ಎರಡು ದಿನ ಕಾಳಿಂಗನಹಳ್ಳಿ ಗ್ರಾಮ ವಾಸ್ತವ್ಯ ಅಂತ್ಯ
ಬೆಳಗಾವಿಯ ಕುವೆಂಪು ನಗರದಲ್ಲಿ 2015ರ ಆಗಸ್ಟ್ 16ರಂದು ನಸುಕಿನ ಜಾವ ತಾಯಿ, ಇಬ್ಬರು ಮಕ್ಕಳು ಸೇರಿ ಮೂವರ ಬರ್ಬರ ಹತ್ಯೆಯಾಗಿತ್ತು.
ಘಟನೆಯಲ್ಲಿ ರೀನಾ ಮಾಲಗತ್ತಿ, ಆದಿತ್ಯ ಮಾಲಗತ್ತಿ, ಸಾಹಿತ್ಯ ಮಾಲಗತ್ತಿ ಕೊಲೆಯಾಗಿತ್ತು. ಕೊಲೆಯಾದ 24 ಗಂಟೆಯಲ್ಲೇ ಆರೋಪಿ ಪ್ರವೀಣ್ ಭಟ್ ಎಂಬಾತನನ್ನು ಬಂಧಿಸಿದ್ದ ಬೆಳಗಾವಿ ಎಪಿಎಂಸಿ ಪೊಲೀಸರು ತನಿಖೆ ನಡೆಸಿ ಬೆಳಗಾವಿ ಎರಡನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು.
ವಾದ ಆಲಿಸಿದ ಬೆಳಗಾವಿ ಕೋರ್ಟ್ 2018ರ ಏಪ್ರಿಲ್ 16ರಂದು ಪ್ರವೀಣ್ ಭಟ್‍ಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಆ ಬಳಿಕ ತೀರ್ಪು ಪ್ರಶ್ನಿಸಿ ಆರೋಪಿ ಪರ ವಕೀಲರು ಹೈಕೊರ್ಟ್ ಮೆಟ್ಟಿಲೇರಿದ್ದರು.
ಈಗ ಧಾರವಾಡ ಹೈಕೋರ್ಟ್ ಪೀಠ ಸಾಕ್ಷಿಗಳ ಕೊರತೆ ಹಿನ್ನೆಲೆ ಆರೋಪಿ ಪ್ರವೀಣ್ ಭಟ್ ನಿರ್ದೋಷಿ ಎಂದು ತೀರ್ಪು ನೀಡಿದೆ.
ತ್ರಿವಳಿ ಕೊಲೆಗೆ ರೀನಾ ಹಾಗೂ ಪ್ರವೀಣ್ ಭಟ್ ನಡುವಿನ ಅನೈತಿಕ ಸಂಬಂಧವೇ ಕಾರಣ ಎನ್ನಲಾಗಿತ್ತು. ಆರೋಪಿ ಪರವಾಗಿ ನ್ಯಾಯವಾದಿ ಪ್ರವೀಣ್ ಕರೋಶಿ ವಾದ ಮಂಡಿಸಿದ್ದಾರೆ.
- ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
- ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
More Stories
ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು