February 17, 2026

Newsnap Kannada

The World at your finger tips!

accident

ಪ್ರಯಾಗ್‌ರಾಜ್‌ ಕುಂಭಮೇಳಕ್ಕೆ ತೆರಳಿದ್ದ ಕುಟುಂಬ – 6 ಮಂದಿ ಅಪಘಾತದಲ್ಲಿ ದುರ್ಮರಣ

Spread the love

ಬೀದರ್: ಉತ್ತರ ಪ್ರದೇಶದ ಕಾಶಿಯ ಬಳಿ ಪ್ರಯಾಗ್‌ರಾಜ್‌ ಕುಂಭಮೇಳಕ್ಕೆ ತೆರಳಿದ್ದ ಬೀದರ್ ಮೂಲದ ಒಂದೇ ಕುಟುಂಬದ 6 ಜನರು ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ನಡೆದಿದೆ.

ಮಿರಜಾಪೂರ್ ಜಿಲ್ಲೆಯ ರೂಪಾಪೂರ ಬಳಿ ಇಂದು ಬೆಳಗ್ಗೆ ಲಾರಿ ಮತ್ತು ಕ್ರೂಸರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 6 ಮಂದಿ ಸಾವನ್ನಪ್ಪಿದ್ದಾರೆ. ಉಳಿದವರ ಸ್ಥಿತಿ ಚಿಂತಾಜನಕವಾಗಿದೆ. ಮೃತರು ಬೀದರ್ ನಗರದ ಲಾಡಗೇರಿ ಬಡಾವಣೆಯ ನಿವಾಸಿಗಳಾಗಿದ್ದು, ಸುನೀತಾ (35), ಸಂತೋಷ್ (43), ನೀಲಮ್ಮ (60) ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಒಂದು ಮಗು ಕೂಡ ಪ್ರಾಣ ಕಳೆದುಕೊಂಡಿದೆ.

ಒಂದೇ ಗಾಡಿಯಲ್ಲಿ ಒಟ್ಟು 12 ಜನ ಕುಂಭಮೇಳಕ್ಕೆ ತೆರಳಿದ್ದು, ಪುಣ್ಯ ಸ್ನಾನ ಮುಗಿಸಿ ಪ್ರಯಾಗ್‌ರಾಜ್‌ನಿಂದ ಕಾಶಿ ಕಡೆಗೆ ಪ್ರಯಾಣಿಸುತ್ತಿದ್ದರು.ಇದನ್ನು ಓದಿ -ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಬೆಂಕಿ: ಅರಣ್ಯ ಇಲಾಖೆ ಸಿಬ್ಬಂದಿಗಳ ರಕ್ಷಣಾ ಕಾರ್ಯಾಚರಣೆ

ಇಂದು ಬೆಳಗ್ಗೆ ಕಾಶಿಯಿಂದ 20 ಕಿಲೋಮೀಟರ್ ದೂರದಲ್ಲಿ ಲಾರಿಗೆ ಕ್ರೂಸರ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ, ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಉಳಿದವರ ಸ್ಥಿತಿ ಗಂಭೀರವಾಗಿದೆ.

error: Content is protected !!