ಕೆ ಆರ್ ಪೇಟೆಯಲ್ಲಿ ಕುಂಭಮೇಳ ಸಿದ್ಧತೆ: ಜಿಲ್ಲಾಧಿಕಾರಿಗಳಿಂದ ಪರಿಶೀಲನೆ

Team Newsnap
0 Min Read

ಕೃಷ್ಣರಾಜ ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿ ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 15,16 ಮತ್ತು 17 ರಂದು ಕುಂಭಮೇಳ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎಸ್.ಅಶ್ವತಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪಾರ್ಕಿಂಗ್, ಸ್ನಾನಘಟ್ಟ, ಹೋಮದ ಸ್ಥಳ, ಯಾತ್ರಿನಿವಾಸ,ರಸ್ತೆ ಮತ್ತು ಯಾತ್ರಿಕರಿಗೆ ಮೂಲಭೂತ ಸೌಕರ್ಯಗಳನ್ನು ಸುಸಜ್ಜಿತವಾಗಿ ಒದಗಿಸುವ ಕುರಿತು ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ಸ್ಥಳದಲ್ಲೆ ತುರ್ತು ಸಭೆ ನಡೆಸಿ ಚರ್ಚಿಸಿದರು.

ಇದೇ ಸಂದರ್ಭದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಪಾಂಡವಪುರ ಉಪವಿಭಾಗಾಧಿಕಾರಿ ಬಿ.ಸಿ. ಶಿವಾನಂದ ಮೂರ್ತಿ, ತಹಶೀಲ್ದಾರ್ ಎಂ.ವಿ.ರೂಪ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Share This Article
Leave a comment