BJP – NDA ರಾಷ್ಟ್ರಪತಿ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಕಣಕ್ಕೆ : ಜೆಪಿ ನಡ್ಡಾ ಘೋಷಣೆ

Team Newsnap
1 Min Read

ರಾಷ್ಟ್ರಪತಿ ಚುನಾವಣೆ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಹೆಸರನ್ನು ಘೋಷಿಸಿದ ಬಿಜೆಪಿ ನೇತೃತ್ವದ ಎನ್ ಡಿಎ ಘೋಷಿಸಿದೆ. ಬಿಜೆಪಿಯ ರಾಷ್ಟ್ರಪತಿ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರು ಕಣಕ್ಕೆ ಇಳಿಯಲಿದ್ದಾರೆ.

murmu1

ಈಗಾಗಲೇ ವಿಪಕ್ಷಗಳಿಂದ ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯನ್ನಾಗಿ ಯಶವಂತ ಸಿನ್ಹಾ ಅವರ ಹೆಸರನ್ನು ಘೋಷಿಸಿವೆ, ಇದೀಗ ಬಿಜೆಪಿ ನೇತೃತ್ವದ ಎನ್ ಡಿ ಎ ದಿಂದ ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯನ್ನಾಗಿ ದ್ರೌಪದಿ ಮುರ್ಮು ಅವರ ಹೆಸರನ್ನು ಘೋಷಿಸಲಾಗಿದೆ. ಇವರು ಜಾರ್ಖಂಡ್ ನ ಮಾಜಿ ರಾಜ್ಯಪಾಲರೂ ಆಗಿದ್ದಾರೆ.

ಜೆಪಿ ನಡ್ಡಾ ಘೋಷಣೆ

ದ್ರೌಪದಿ ಮುರ್ಮು ಎನ್​ಡಿಎ ಒಕ್ಕೂಟದ ರಾಷ್ಟ್ರಪತಿ ಅಭ್ಯರ್ಥಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಘೋಷಿಸಿದರು. ರಾಷ್ಟ್ರಪತಿ ಚುನಾವಣೆಗೆ ತಮ್ಮ ಅಭ್ಯರ್ಥಿಯ ಆಯ್ಕೆಯ ಸಂಬಂಧ ಇಂದು ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಸಂಸದೀಯ ಮಂಡಳಿಯ ಸಭೆ ನಡೆಸಿತ್ತು.

ಬಿಜೆಪಿ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಜಾರ್ಖಂಡ್‌ನ ಮಾಜಿ ರಾಜ್ಯಪಾಲೆ ದ್ರೌಪದಿ ಮುರ್ಮು ಅವರನ್ನು ಒಮ್ಮತದಿಂದ ಆಯ್ಕೆ ಮಾಡಲಾಗಿದೆ ಎಂದು ಜೆಪಿ ನಡ್ಡಾ ತಿಳಿಸಿದ್ದಾರೆ.

ಇದನ್ನು ಓದಿ – ರಾಷ್ಟ್ರಪತಿ ಚುನಾವಣೆ: ವಿರೋಧ ಪಕ್ಷದ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಘೋಷಣೆ

ಸಂಸದೀಯ ಮಂಡಳಿಯ ಸಭೆಯಲ್ಲಿ ಸುಮಾರು 20 ಹೆಸರುಗಳನ್ನು ಚರ್ಚಿಸಲಾಗಿತ್ತು. ಅಂತಿಮವಾಗಿ ಬುಡಕಟ್ಟು ಸಮುದಾಯದ ಮಹಿಳಾ ನಾಯಕಿ ಮುರ್ಮು ಅವರನ್ನು ಆಯ್ಕೆ ಮಾಡಲಾಗಿದೆ ಎಂದು ನಡ್ಡಾ ತಿಳಿಸಿದ್ದಾರೆ.

Share This Article
Leave a comment