ರಾಷ್ಟ್ರಪತಿ ಚುನಾವಣೆ, ಮಮತಾ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಬಾಗಿ.

Team Newsnap
2 Min Read
president elections

ಗುರುವಾರ ನವದೆಹಲಿಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧ ಪಕ್ಷಗಳ ತಂತ್ರಗಳ ಕುರಿತು ಚರ್ಚಿಸಲು ಸಭೆ ಕರೆದಿದ್ದಾರೆ. ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರು ಸಭೆಯಲ್ಲಿ ಉಪಸ್ಥಿತರಿರಲಿದ್ದಾರೆ. ಗುರುವಾರ ಬೆಳಗ್ಗೆ ಎಚ್. ಡಿ. ಕುಮಾರಸ್ವಾಮಿ ನವದೆಹಲಿಗೆ ತೆರಳಲಿದ್ದಾರೆ.ರಾಷ್ಟ್ರಪತಿ ಚುನಾವಣೆ ಸಂಬಂಧ ಮಮತಾ ಬ್ಯಾನರ್ಜಿ ಕರೆದಿರುವ ಪ್ರತಿಪಕ್ಷಗಳ ಸಭೆ ಭಾರೀ ಮಹತ್ವ ಪಡೆದಿದೆ. ಇದನ್ನು ಓದಿ – ದಕ್ಷಿಣ ಪದವೀಧರ ಕ್ಷೇತ್ರ : ಮಧು ಮಾದೇಗೌಡ ಭಾರಿ ಮುನ್ನಡೆ : ಮೊದಲ ಸುತ್ತಿನಲ್ಲೇ ಕಾಂಗ್ರೆಸ್ ಗೆ 2601 ಮತ

ಮಮತಾ ಬ್ಯಾನರ್ಜಿ ಜೆಡಿಎಸ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಎಚ್. ಡಿ. ದೇವೇಗೌಡರಿಗೆ ಹಾಗೂ ನನಗೆ ವೈಯಕ್ತಿಕವಾಗಿ ಕರೆ ಮಾಡಿ ಆಹ್ವಾನಿಸಿದ್ದಾರೆ. ಹೀಗಾಗಿ ನಾವಿಬ್ಬರೂ ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದೇವೆ ಎಂದು ಎಚ್. ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಇಡೀ ದೇಶವೇ ಸಭೆಯಲ್ಲಿ ಕೈಗೊಳ್ಳುವ ತೀರ್ಮಾನದ ಬಗ್ಗೆ ಕಾದು ನೋಡುತ್ತಿದೆ. ಈ ಸಭೆಯಲ್ಲಿ ಎಚ್. ಡಿ. ಕುಮಾರಸ್ವಾಮಿ ಪಾಲ್ಗೊಳ್ಳುತ್ತಿದ್ದಾರೆ.ಈ ಬಗ್ಗೆ ಎಚ್. ಡಿ. ಕುಮಾರಸ್ವಾಮಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ಒಕ್ಕೂಟದಿಂದ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆಸಲು ಮಮತಾ ಬ್ಯಾನರ್ಜಿ ಅವರು ದೆಹಲಿಯಲ್ಲಿ ಸಭೆ ಕರೆದಿದ್ದಾರೆ ಎಂದು ಹೇಳಿದ್ದಾರೆ. ಇದನ್ನು ಓದಿ – 5G ನೆಟ್ ವರ್ಕ್ ಹರಾಜಿಗೆ ಕೇಂದ್ರ ಸಂಪುಟ ಅಸ್ತು : 10 ಪಟ್ಟು ನೆಟ್ ವರ್ಕ್ ಸ್ಪೀಡ್ !

ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಎಲ್ಲಾ ಪ್ರಾದೇಶಿಕ ಪಕ್ಷಗಳ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಮಮತಾ ಬ್ಯಾನರ್ಜಿ ಅವರು ಪ್ರಯತ್ನಗಳನ್ನು ಆರಂಭಿಸಿದ್ದು, ಸುಮಾರು 22ಕ್ಕೂ ಹೆಚ್ಚು ಪಕ್ಷಗಳ ನಾಯಕರನ್ನು ಸಭೆಗೆ ಆಹ್ವಾನಿಸಿದ್ದಾರೆ. ಆದರೆ, ಜೆಡಿಎಸ್‌ ಪಕ್ಷದಿಂದ ಇಬ್ಬರು ನಾಯಕರನ್ನು ಅವರು ವೈಯಕ್ತಿವಾಗಿ ಆಹ್ವಾನಿಸಿದ್ದಾರೆ.ನವದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ಮಧ್ಯಾಹ್ನ 3 ಗಂಟೆಗೆ ಈ ಸಭೆ ನಡೆಯಲಿದೆ. ಕಾಂಗ್ರೆಸ್‌ ಪಕ್ಷದಿಂದ ಮಲ್ಲಿಕಾರ್ಜುನ ಖರ್ಗೆ, ಜೈರಾಮ್ ರಮೇಶ್, ರಣದೀಪ್ ಸಿಂಗ್ ಸುರ್ಜೇವಾಲಾ ಪಾಲ್ಗೊಳ್ಳಲಿದ್ದಾರೆ.

16ನೇ ರಾಷ್ಟ್ರಪತಿ ಆಯ್ಕೆಗೆ ಚುನಾವಣಾ ಆಯೋಗ ಈಗಾಗಲೇ ವೇಳಾಪಟ್ಟಿ ಪ್ರಕಟಿಸಿದೆ. ಜುಲೈ 18ರಂದು ಚುನಾವಣೆ ನಡೆಯಲಿದೆ. ಜುಲೈ 21ರಂದು ಮತ ಎಣಿಕೆ ನಡೆಯಲಿದೆ.

Share This Article
Leave a comment