ರಾಷ್ಟ್ರಪತಿ ಚುನಾವಣೆಯ ದಿನಾಂಕ ಪ್ರಕಟ : ಜುಲೈ 18ರಂದು ಚುನಾವಣೆ

Team Newsnap
1 Min Read

ಕೇಂದ್ರ ಚುನಾವಣಾ ಆಯೋಗವು ಪತ್ರಿಕಾಗೋಷ್ಠಿ ನಡೆಸಿ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಜುಲೈ 18ರಂದು ಚುನಾವಣೆ ನಡೆಯಲಿದೆ. ಜುಲೈ 21ರಂದು ಮತ ಎಣಿಕೆ ನಡೆಯಲಿದೆ.

ಗುರುವಾರ ಮಧ್ಯಾಹ್ನ ಚುನಾವಣಾ ಆಯೋಗದ ಪತ್ರಿಕಾಗೋಷ್ಠಿ ನಿಗದಿಯಾಗಿತ್ತು. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಚುನಾವಣಾ ದಿನಾಂಕವನ್ನು ಘೋಷಣೆ ಮಾಡಿದರು. ಹಾಲಿ ರಾಷ್ಟ್ರಪತಿಯಾಗಿರುವ ರಾಮನಾಥ ಕೋವಿಂದ್ ಅವಧಿ ಜುಲೈ 24ಕ್ಕೆ ಅಂತ್ಯಗೊಳ್ಳಲಿದೆ.

ಆಯ್ಕೆಯಾಗುವ ಹೊಸ ರಾಷ್ಟ್ರಪತಿ ಅವರು ಜುಲೈ 25ಕ್ಕೆ ಅಧಿಕಾರ ಸ್ವೀಕರಿಸಲಿದ್ದು, 2022 ರ ರಾಷ್ಟ್ರಪತಿ ಚುನಾವಣೆಯಲ್ಲಿ ಒಟ್ಟು 4,809 ಮತದಾರರು ಮತಚಲಾಯಿಸಲಿದ್ದಾರೆ.

ಸಂಸತ್ತಿನ ಎರಡೂ ಸದನಗಳ ಚುನಾಯಿತ ಸದಸ್ಯರು ಮತ್ತು ದೆಹಲಿ ಮತ್ತು ಪದುಚೇರಿ ಕೇಂದ್ರಾಡಳಿತ ಪ್ರದೇಶ ಸೇರಿದಂತೆ ಎಲ್ಲಾ ರಾಜ್ಯಗಳ ಶಾಸಕಾಂಗ ಸಭೆಗಳ ಚುನಾಯಿತ ಸದಸ್ಯರು ಮತ ಚಲಾಯಿಸಲಿದ್ದಾರೆ. ನಾಮ ನಿರ್ದೇಶನಗೊಂಡ ಸದಸ್ಯರಿಗೆ ಮತದಾನದ ಹಕ್ಕಿಲ್ಲ.

ಇದನ್ನು ಓದಿ –ಜೆಡಿಎಸ್‌ಗೆ ಅಡ್ಡ ಮತದಾನದ ಭೀತಿ – ಶಾಸಕರು ರೆಸಾರ್ಟ್‌ಗೆ ಶಿಫ್ಟ್?

ಆಡಳಿತಾರೂಢ ಬಿಜೆಪಿ ಈಗಾಗಲೇ ರಾಷ್ಟ್ರಪತಿ ಚುನಾವಣೆಗೆ ತಯಾರಿ ನಡೆಸಿದೆ. ಯಾರನ್ನುಅಭ್ಯರ್ಥಿ ಮಾಡಬೇಕು? ಎಂದು ಚರ್ಚೆಗಳು ಜೋರಾಗಿವೆ. ಲೋಕಸಭೆಯಲ್ಲಿ ಸ್ಪಷ್ಟ ಬಹುಮತ ಹೊಂದಿರುವ ಬಿಜೆಪಿ ಯಾರನ್ನು ಅಭ್ಯರ್ಥಿಯಾಗಿ ಮಾಡಲಿದೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

Share This Article
Leave a comment