ರಾಷ್ಟ್ರಪತಿ ಚುನಾವಣೆ ಮತ ಎಣಿಕೆ ಕಾರ್ಯ ಸಂಸತ್ ಭವನದಲ್ಲಿ ಬಿರುಸಾಗಿ ಸಾಗಿದೆ. ಇದುವರೆಗೂ ನಡೆದ ಮತ ಎಣಿಕೆಯಲ್ಲಿ ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಬುಡಕಟ್ಟು ಸಮುದಾಯದ ನಾಯಕಿ ದ್ರೌಪದಿ ಮುರ್ಮು ಭಾರಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ವಿರೋಧ ಪಕ್ಷಗಳ ಬೆಂಬಲಿತ ಅಭ್ಯರ್ಥಿ ಟಿಎಂಸಿ ನಾಯಕ ಯಶವಂತ್ ಸಿನ್ಹಾ ಭಾರೀ ಹಿನ್ನಡೆ ಅನುಭವಿಸಿದ್ದಾರೆ.
ದ್ರೌಪದಿ ಮುರ್ಮು 540 ಮತ ಪಡೆದುಕೊಂಡು ಭಾರೀ ಮುನ್ನಡೆ ಸಾಧಿಸಿದ್ದಾರೆ. ಮುರ್ಮು ಎದುರು ಕಣದಲ್ಲಿರುವ ಯಶವಂತ್ ಸಿನ್ಹಾ ಕೇವಲ 208 ಮತ ಪಡೆದುಕೊಂಡಿದ್ದಾರೆ. ದ್ರೌಪದಿ ಮುರ್ಮು ಪಡೆದ 540 ಮತಗಳ ಮೌಲ್ಯ 3,78,000 ಆಗಿದ್ದು, ಯಶವಂತ್ ಸಿನ್ಹಾ 208 ಮತಗಳ ವ್ಯಾಲ್ಯೂ 1,45,600 ಆಗಿದೆ.
ಇನ್ನು, ಎನ್‌ಡಿಎ ಬೆಂಬಲಿತ ಅಭ್ಯರ್ಥಿ ದ್ರೌಪದಿ ಮುರ್ಮು ಗೆಲುವು ಬಹುತೇಕ ನಿಚ್ಚಳವಾಗಿದೆ. ರಾಜ್ಯಸಭಾ ಸದಸ್ಯರಾಗಿ ವೀರೇಂದ್ರ ಹೆಗ್ಗಡೆ ಕನ್ನಡದಲ್ಲೇ ಪ್ರಮಾಣವಚನ
ಹೀಗಾಗಿ ಈ ಮುನ್ನವೇ ಮುರ್ಮು ತವರು ಒಡಿಶಾದ ಮಯೂರ್‌ಭಂಜ್ ಜಿಲ್ಲೆಯ ರಾಯ್‌ರಂಗಪುರ್‌ನಲ್ಲಿ ಸಂಭ್ರಮ ಮನೆ ಮಾಡಿದೆ. ಇದೇ ಮೊದಲ ಬಾರಿಗೆ ಬುಡಕಟ್ಟು ಸಮುದಾಯದ ಮಹಿಳೆ ರಾಷ್ಟ್ರದ ಪರಮೋಚ್ಚ ಸ್ಥಾನ ಅಲಂಕರಿಸುತ್ತಿದ್ದಾರೆ.
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
More Stories
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್