November 16, 2024

Newsnap Kannada

The World at your finger tips!

rastrapathi bhavan

ರಾಷ್ಟ್ರಪತಿ ಚುನಾವಣೆ – ಬಿಜೆಪಿ ಅಭ್ಯರ್ಥಿಗೆ ಸುಲಭ ಜಯ

Spread the love

ಉತ್ತರ ಪ್ರದೇಶದಲ್ಲಿ ಗೆಲುವಿನಿಂದಾಗಿ ಈ ಬಾರಿಯ ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸುಲಭವಾಗಿ ಗೆಲುವು ಸಾಧಿಸಲಿದ್ದಾರೆ.

ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರ ಅವಧಿ ಜು.24ಕ್ಕೆ ಅಂತ್ಯಗೊಳ್ಳಲಿದೆ. 75 ವರ್ಷ ಮೇಲ್ಪಟ್ಟವರಿಗೆ ಪಕ್ಷದಿಂದ ನಿವೃತ್ತಿ ನೀಡುವ ಹಿನ್ನೆಲೆಯಲ್ಲಿ 76 ವರ್ಷದ ಕೋವಿಂದ್‌ ಅವರನ್ನು ಎರಡನೇ ಬಾರಿ ಆಯ್ಕೆ ಮಾಡುವುದು ಸಾಧ್ಯತೆ ಕಡಿಮೆ

ರಾಷ್ಟ್ರಪತಿ ಚುನಾವಣೆಯಲ್ಲಿ ಲೋಕಸಭೆ ಸದಸ್ಯರು, ರಾಜ್ಯಸಭೆ ಸದಸ್ಯರು, ರಾಜ್ಯ ವಿಧಾನಸಭೆಗಳ ಸದಸ್ಯರು ಮತ್ತು ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭೆ ಸದಸ್ಯರು ಮತ ಹಾಕುತ್ತಾರೆ. ವಿಧಾನಪರಿಷತ್‌ ಸದಸ್ಯರಿಗೆ ಮತ ಇಲ್ಲ.

543 ಲೋಕಸಭಾ ಸದಸ್ಯರು, 233 ರಾಜ್ಯಸಭಾ ಸದಸ್ಯರು ಮತ್ತು ದೇಶದ ವಿಧಾನಸಭೆಯಲ್ಲಿರುವ 4,120 ಶಾಸಕರು ಮತ ಹಾಕಲಿದ್ದಾರೆ. ರಾಷ್ಟ್ರಪತಿ ಚುನಾವಣೆಯಲ್ಲಿ ಒಟ್ಟು 10,98,903 ಮತಗಳು ಚಲಾವಣೆಯಾಗುತ್ತವೆ. ಶೇ.50ಕ್ಕಿಂತ ಹೆಚ್ಚು ಮತ ಪಡೆದ ಅಭ್ಯರ್ಥಿ ಜಯಗಳಿಸುತ್ತಾರೆ.

ಎಲ್ಲಾ ಸಂಸದರ ವೋಟಿನ ಮೌಲ್ಯ 708. ರಾಜ್ಯದ ಜನಸಂಖ್ಯೆಯ ಆಧಾರದ ಮೇಲೆ ಶಾಸಕನ ಮತವನ್ನು ಲೆಕ್ಕಾಚಾರ ಮಾಡಲಾಗುತ್ತದೆ. ಉತ್ತರ ಪ್ರದೇಶದ ಒಬ್ಬ ಶಾಸಕನ ಮತಕ್ಕೆ ದೇಶದಲ್ಲೇ ಅತಿಹೆಚ್ಚು ಮೌಲ್ಯ 208 ಇದೆ. ದೇಶದಲ್ಲೇ ಕಡಿಮೆ ಇರುವ ಸಿಕ್ಕಿಂ ರಾಜ್ಯದ ಒಬ್ಬ ಶಾಸಕನ ಮತದ ಮೌಲ್ಯ 7 ಇದೆ.

ಉತ್ತರ ಪ್ರದೇಶದ 403 ಶಾಸಕರ ವೋಟಿನ ಮೌಲ್ಯ ಒಟ್ಟು 83,824. 80 ಸಂಸದರು ಮತ ಸೇರಿದರೆ ಮೌಲ್ಯ 56,640 ಆಗುತ್ತದೆ. ಉತ್ತರ ಪ್ರದೇಶ ಒಂದೇ ರಾಜ್ಯದಿಂದ 1.4 ಲಕ್ಷ ಮೌಲ್ಯದ ಮತಗಳು ಚಲಾವಣೆ ಆಗುತ್ತದೆ. ಉತ್ತರಾಖಂಡ 4,480, ಗೋವಾ 800, ಮಣಿಪುರದಲ್ಲಿ 1,080 ಮತಗಳು ಚಲಾವಣೆ ಆಗುತ್ತದೆ.

ಪಂಚರಾಜ್ಯಗಳ ಚುನಾವಣೆಗೂ ಮೊದಲು ಬಿಜೆಪಿ ಬಳಿ ರಾಷ್ಟ್ರಪತಿಯನ್ನು ಆಯ್ಕೆ ಮಾಡಿಕೊಳ್ಳಲು ಬೇಕಾದಷ್ಟು ಮತಗಳಿದ್ದವು. ಒಂದು ವೇಳೆ ಉತ್ತರ ಪ್ರದೇಶದಲ್ಲಿ ಸೋತಿದ್ದರೆ ಬಿಜೆಡಿ, ಟಿಆರ್‌ಎಸ್‌, ವೈಎಸ್‌ಆರ್‌ ಪಕ್ಷಗಳ ಬೆಂಬಲವನ್ನು ಬಿಜೆಪಿ ಕೇಳಬೇಕಿತ್ತು.

Copyright © All rights reserved Newsnap | Newsever by AF themes.
error: Content is protected !!