ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಈವೆರೆಗೆ ರಾಷ್ಟ್ರಪತಿ ಚುನಾವಣೆಗೆ 11 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಅವರಲ್ಲಿ ದಾಖಲೆಗಳ ಕೊರತೆಯಿಂದಾಗಿ ಓರ್ವ ಅಭ್ಯರ್ಥಿಯ ನಾಮಪತ್ರವನ್ನು ತಿರಸ್ಕರಿಸಲಾಗಿದೆ.
ಇದನ್ನು ಓದಿ – UP ಯಲ್ಲಿ ಬುಲ್ಡೋಜರ್ ಕಾರ್ಯಾಚರಣೆಗೆ ಮಧ್ಯಂತರ ತಡೆ ನೀಡದ ಸುಪ್ರೀಂ
ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆ ರಾಷ್ಟ್ರಪತಿಯಲ್ಲಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವಧಿ ಮುಗಿಯಲಿದೆ ಆ ಸ್ಥಾನಕ್ಕೆ ಚುನಾವಣೆಗಾಗಿ ಚುನಾವಣಾ ಅಧಿಸೂಚನೆ ಹೊರಡಿಸಲಾಗಿದೆ.
ನಾಮನಿರ್ದೇಶನ ಪ್ರಕ್ರಿಯೆಯೂ ಪ್ರಾರಂಭವಾಗಿದೆ. ಜುಲೈ 18 ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದೆ, ಜೂನ್ 29ರ ವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ಚುನಾವಣೆಯ ಭದ್ರತಾ ಠೇವಣಿ 15 ಸಾವಿರ ರೂ. ಇದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಅಭ್ಯರ್ಥಿಯು ಮತದಾರರಾಗಿ ನೋಂದಾಯಿಸಿಕೊಂಡಿರುವ ಪಟ್ಟಿಯಲ್ಲಿ ತನ್ನ ಹೆಸರನ್ನು ತೋರಿಸುವ ನಮೂನೆಯ ಪ್ರಮಾಣೀಕೃತ ಪ್ರತಿಯನ್ನು ಲಗತ್ತಿಸದ ಕಾರಣ ಒಬ್ಬ ಅಭ್ಯರ್ಥಿಯ ನಾಮನಿರ್ದೇಶನವನ್ನು ತಿರಸ್ಕರಿಸಲಾಗಿದೆ.
ರಾಷ್ಟ್ರಪತಿ ಚುನಾವಣೆಗೆ NCP ನಾಯಕ ಶರದ್ ಪವಾರ್ ಅವರನ್ನು ಒಮ್ಮತದ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಉದ್ದೇಶಿಸಲಾಗಿತ್ತು. ಕಾಂಗ್ರೆಸ್, ಜೆಡಿಎಸ್, ಟಿಎಂಸಿ, ಆರ್‌ಜೆಡಿ ಸೇರಿದಂತೆ ಮೊದಲಾದ ಪಕ್ಷಗಳೂ ಇದಕ್ಕೆ ಬೆಂಬಲ ಸೂಚಿಸಿದ್ದವು. ಇದಕ್ಕಾಗಿ ನಿನ್ನೆ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸುಮಾರು 18 ರಾಜಕೀಯ ಪಕ್ಷದ ನಾಯಕರು ಪಾಲ್ಗೊಂಡಿದ್ದರು. ಈ ವೇಳೆ ತಾವು ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸುವುದಿಲ್ಲವೆಂದು ಪವಾರ್ ಸ್ಪಷ್ಟಪಡಿಸಿದ್ದಾರೆ.
ಯಾರು ನಾಮಪತ್ರ ಸಲ್ಲಿಸಿದ್ದಾರೆ :
ತಮಿಳುನಾಡಿನ ಕೆ.ಪದ್ಮರಾಜನ್ ಮೊದಲು ನಾಮಪತ್ರ ಸಲ್ಲಿಸಿದ್ದಾರೆ. ಆ ನಂತರ ಎ.ಮಣಿಥನ್, ದೆಹಲಿಯಿಂದ ಜೀವನ್ ಕುಮಾರ್ ಮಿತ್ತಲ್, ದಯಾ ಶಂಕರ್ ಅಗರ್ವಾಲ್, ಓಂಪ್ರಕಾಶ್ ಖರಬಂದ, ಮಹಾರಾಷ್ಟ್ರದ ಮೊಹಮ್ಮದ್ ಎ.ಹಮಿದ್ ಪಟೇಲ್, ನಾಮಕ್ಕಲ್‌ನಿಂದ ಟಿ. ರಮೇಶ್, ಬಿಹಾರದಿಂದ ಶ್ಯಾಮ್ ನಂದನ್ ಪ್ರಸಾದ್, ಲಾಲೂ ಪ್ರಸಾದ್ ಯಾದವ್ ಹಾಗೂ ಆಂಧ್ರಪ್ರದೇಶದಿಂದ ಮಂದತಿ ತಿರುಪತಿ ರೆಡ್ಡಿ ನಾಮಪತ್ರ ಸಲ್ಲಿಸಿದ್ದಾರೆ.
- ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
- ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
- ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ
- ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
- ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
- ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
More Stories
ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ