ಇಂದು ರಾಷ್ಟ್ರಪತಿ ಚುನಾವಣೆ : NDA ಅಭ್ಯರ್ಥಿ ದ್ರೌಪದಿ ಮುರ್ಮು ಗೆಲುವು ಸಾಧ್ಯತೆ

Team Newsnap
1 Min Read

ದೇಶಾದ್ಯಂತ ಇಂದು ದೇಶದ ಪ್ರಪ್ರಥಮ ಪ್ರಜೆ ಹಾಗೂ 15 ನೇ ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಎನ್​ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಹಾಗೂ ವಿಪಕ್ಷಗಳ ಅಭ್ಯರ್ಥಿ ಯಶ್​ವಂತ ಸಿನ್ಹ ನಡುವೆ ಕಾಳಗ ನಡೆಯಲಿದೆ.

ಈಗಾಗಲೇ ಚುನಾವಣೆಗೆ ಚುನಾವಣಾ ಆಯೋಗ ಸಿದ್ಧತೆ ಮಾಡಿಕೊಂಡಿದೆ ಮತದಾನಕ್ಕೆ ಕ್ಷಣಗಣನೆ ಶುರುವಾಗಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ . ಜುಲೈ 21 ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ.ಜುಲೈ 25 ರಂದು ನೂತನ ರಾಷ್ಟ್ರಪತಿಗಳು ಅಧಿಕಾರ ಸ್ವೀಕರಿಸಲಿದ್ದಾರೆ.

ರಾಷ್ಟ್ರಪತಿ ಚುನಾವಣೆಯ ಮತದಾನಕ್ಕೆ ದೇಶಾದ್ಯಂತ ಸಕಲ ಸಿದ್ದತೆ ನಡೆದಿದ್ದು ರಾಜ್ಯದಲ್ಲೂ ತಯಾರಿ ಜೋರಾಗಿದೆ. ವಿಧಾನಸೌಧದ ಮೊದಲನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 106 ರಲ್ಲಿ ಮತಗಟ್ಟೆ ಸ್ಥಾಪಿಸಲಾಗಿದೆ.

ದ್ರೌಪದಿ ಮುರ್ಮು ಹಾಗೂ ವಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿದೆ. ಆದರೆ ಎನ್‌ಡಿಎ ಬಹುಮತ ಹೊಂದಿರುವ ಕಾರಣ ದ್ರೌಪದಿ ಮುರ್ಮು ಗೆಲುವು ಬಹುತೇಕ ಖಚಿತ ಎನ್ನಲಾಗುತ್ತಿದೆ. ಇನ್ನು ದ್ರೌಪದಿ ಮುರ್ಮುಗೆ ಜೆಡಿಎಸ್​ ಸೇರಿದಂತೆ 44 ಪಕ್ಷಗಳು ಬೆಂಬಲ ಸೂಚಿಸಿವೆ.

ಪ್ರತಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಯಶವಂತ್ ಸಿನ್ಹಾ ಚುನಾವಣೆಯಲ್ಲಿ ತಮಗೆ ಮತ ನೀಡುವಂತೆ ಎಲ್ಲ ರಾಜಕೀಯ ಪಕ್ಷಗಳಿಗೆ ಮನವಿ ಮಾಡಿದ್ದಾರೆ. ರಾಷ್ಟ್ರ್ರಪತಿ ಚುನಾವಣೆಯು ಇಬ್ಬರು ಅಭ್ಯರ್ಥಿಗಳ ಸ್ಪರ್ಧೆ ಅಲ್ಲ, ಎರಡು ಸಿದ್ಧಾಂತಗಳ ನಡುವಿನ ಸ್ಪರ್ಧೆ ಅಂತ ಹೇಳಿದ್ದಾರೆ. ಮದರಸಾಗಳಲ್ಲೂ ಕಡ್ಡಾಯವಾಗಿ ತ್ರಿವರ್ಣಧ್ವಜ ಹಾರಲೇಬೇಕು – ಸರ್ಕಾರದಿಂದ ಆದೇಶ

ತಾವು ಭಾರತದ ಪ್ರಜಾಪ್ರಭುತ್ವವನ್ನು ರಕ್ಷಿಸಲು ನಿಂತಿರುವುದಾಗಿ, ಪ್ರಜಾಪ್ರಭುತ್ವದ ಮೇಲೆ ದಿನನಿತ್ಯ ದಾಳಿ ಮಾಡುವವರು ದ್ರೌಪದಿ ಮುರ್ಮುರನ್ನು ಬೆಂಬಲಿಸುತ್ತಿದ್ದಾರೆ ಎಂದಿದ್ದಾರೆ. ಎಲ್ಲಾ ಶಾಸಕರು ಮತ್ತು ಸಂಸದರು ತಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ಮತ ಚಲಾಯಿಸುವಂತೆ ಒತ್ತಾಯಿಸಿದ್ದಾರೆ.

Share This Article
Leave a comment