ನಾಟು ನಾಟು ಹಾಡಿಗೆ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ : ಭಾರತಕ್ಕೆ ಚಿನ್ನದ ಗರಿ

Team Newsnap
2 Min Read

ಜಗತ್ತಿನ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಯು ಮೂಲ ಹಾಡಿನ ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ತೆಲುಗಿನ ಆರ್.ಆರ್.ಆರ್ ಸಿನಿಮಾದ ‘ನಾಟು ನಾಟು’ ಹಾಡಿಗೆ ಸಂದಿದೆ.

ರಾಜಮೌಳಿ ನಿರ್ದೇಶನದಲ್ಲಿ ಮೂಡಿ ಬಂದ ಆರ್.ಆರ್.ಆರ್ ಚಿತ್ರದ ಈ ಹಾಡು ಆಸ್ಕರ್ ತರುವ ಭರವಸೆಯನ್ನೂ ಮೂಡಿಸಿತ್ತು. ಆಸ್ಕರ್ ವೇದಿಕೆಯ ಮೇಲೆ ಈ ಹಾಡನ್ನು ಗಾಯಕರಾದ ಸಿಪ್ಲಿಗಂಜ ಹಾಗೂ ಕಾಲಭೈರವ ಹಾಡಿದ್ದರು. ಅಮೆರಿಕಾದ ನಟ, ಡಾನ್ಸರ್ ಲಾರೆನ್ ಗೋತ್ಲಿಬ್ ನೃತ್ಯ ಮಾಡಿದ್ದರು.

WhatsApp Image 2023 03 13 at 9.30.15 AM

ಲಾಸ ಏಂಜಿಲೀಸ್ ನಲ್ಲಿ ನಡೆದ ಅದ್ದೂರಿನ ಕಾರ್ಯಕ್ರಮದಲ್ಲಿ ನಾಟು ನಾಟು ಹಾಡಿಗೆ ಪ್ರಶಸ್ತಿ ಘೋಷಣೆ ಆಗುತ್ತಿದ್ದಂತೆಯೇ ಸಭಾಂಗಣದ ತುಂಬಾ ಚೆಪ್ಪಾಳೆಯದ್ದೇ ಸದ್ದು. ಮಂಡ್ಯದಲ್ಲಿ ಮೋದಿ ರೋಡ್ ಶೋ –ಅಭಿಮಾನಿಗಳಿಗೆ ಪ್ರಧಾನಿ ಪುಷ್ಪಾರ್ಚನೆ

ಭಾರತದಲ್ಲೂ ರಾಮ್ ಚರಣ್ ಮತ್ತು ಜ್ಯೂನಿಯರ್ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಭಾರತೀಯ ಸಿನಿಮಾ ರಂಗದ ಅನೇಕರು ಸೋಷಿಯಲ್ ಮೀಡಿಯಾ ಮೂಲಕ ಶುಭಾಶಯ ಕೋರಿದ್ದಾರೆ.

ತೆಲುಗು ಸಿನಿಮಾ ರಂಗದಲ್ಲಿ ಹಬ್ಬದ ವಾತಾವರಣವೇ ಕಂಡು ಬಂದಿದೆ. ಅಮೆರಿಕಾದ ಲಾಸ್ ಏಂಜಲೀಸ್ ಡಾಲ್ಬಿ ಥಿಯೇಟರ್ ನಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಜಗತ್ತಿನ ಹೆಸರಾಂತ ಕಲಾವಿದರು ಹಾಗೂ ತಂತ್ರಜ್ಞರು ಭಾಗಿಯಾಗಿದ್ದಾರೆ. ಅಲ್ಲದೇ ನಿರ್ದೇಶಕ ರಾಜಮೌಳಿ, ನಟರಾದ ರಾಮ್ ಚರಣ್, ಜ್ಯೂನಿಯರ್ ಎನ್.ಟಿ.ಆರ್ ಸೇರಿದಂತೆ ಆರ್.ಆರ್.ಆರ್ ಚಿತ್ರತಂಡ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗಿಯಾಗಿದೆ.

ಭಾರತದಿಂದ ಒಂದು ಸಿನಿಮಾ ಮತ್ತು ಎರಡು ಡಾಕ್ಯುಮೆಂಟರಿಗಳು ಪ್ರಶಸ್ತಿಯ ಕಣದಲ್ಲಿದ್ದವು. ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಈ ಕಾರ್ಯಕ್ರಮದ ನಿರೂಪಣೆ ಮಾಡುತ್ತಿರುವುದು ಹೆಮ್ಮೆ ತಂದಿದೆ.

ಆಸ್ಕರ್ ಪ್ರಶಸ್ತಿಯ ಟ್ರೋಫಿ ಜೊತೆ ನಗದು ಬಹುಮಾನ ಕೊಡದೇ ಇದ್ದರೂ, ಉಡುಗೊರೆಯ ರೂಪದಲ್ಲಿ ಅನೇಕ ವಸ್ತುಗಳು, ಪ್ರವಾಸ ಪ್ಯಾಕೇಜ್ ಗಳು ವಿಜೇತರಿಗೆ ಸಿಗುತ್ತವೆ. ಕೇವಲ ಪ್ರಶಸ್ತಿ ಗೆದ್ದವರಿಗೆ ಮಾತ್ರವಲ್ಲ, ನಾಮ ನಿರ್ದೇಶನಗೊಂಡವರಿಗೆ ಉಡುಗೊರೆ ಇರಲಿದೆ.

ಈ ಬಾರಿ ಗಿಫ್ಟ್ ಬಾಕ್ಸ್ ನಲ್ಲಿ 1 ಲಕ್ಷ ಡಾಲರ್ ಮೌಲ್ಯದ ಉಡುಗೊರೆಗಳು ಇವೆ ಎಂದು ಹೇಳಲಾಗುತ್ತಿದೆ. ಅಲ್ಲದೇ ಪೀಸೆಸ್ ಆಫ್ ಆಸ್ಟ್ರೇಲಿಯಾ ಹೆಸರಿನ ಕಂಪೆನಿಯೊಂದು ನಾಮ ನಿರ್ದೇಶನಗೊಂಡವರಿಗೆ ಆಸ್ಟ್ರೇಲಿಯಾದಲ್ಲಿ ಒಂದು ಚದರ ಮೀಟರ್ ಭೂಮಿ ಕೊಡಲು ಮುಂದಾಗಿದೆಯಂತೆ.

#NatuNatu #RRR #Oscar2023 #Oscaraward #Telugumovie #SouthFilmIndustry #IndianCinema #Oscar #Breakingnews #Cinema #Entertainment #RRRMovie

Share This Article
Leave a comment