ಬೆಂಗಳೂರು: ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 3 ರು ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.
ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಹಾಲು ಒಕ್ಕೂಟಗಳು ಹಾಗೂ ಕೆಎಂಎಫ್ ಅಧ್ಯಕ್ಷರೊಂದಿಗೆ ನಡೆಸಿದ ಸಭೆಯಲ್ಲಿ ಹಾಲು ಒಕ್ಕೂಟಗಳು ನೀಡಿದ್ದ ನಂದಿನಿ ದರ 5 ರು ಹೆಚ್ಚಳ ಪ್ರಸ್ತಾನೆಯ ಬಗ್ಗೆ ಮಹತ್ವದ ಚರ್ಚೆಯನ್ನು ನಡೆಸಿದರು.
ನಂದಿನಿ ಹಾಲಿನ ಪುಡಿಯ ದರವನ್ನು ಹೆಚ್ಚಳದ ಬಗ್ಗೆಯೂ ಚರ್ಚೆ ನಡೆಸಲಾಯಿತು.
ಈ ಸಭೆಯಲ್ಲಿ ನಂದಿನಿ ಹಾಲಿನ ಪ್ರತಿ ಲೀಟರ್ ದರವನ್ನು ರೂ.3 ಹೆಚ್ಚಳ ಮಾಡುವ ನಿರ್ಧಾರವನ್ನು ಕೈಗೊಂಡಿದ್ದಾರೆ.7 ಸಾವಿರ ರು ಲಂಚ ಸ್ವೀಕಾರ ವೇಳೆ ಹಾವೇರಿ ಡಿಡಿಪಿಐ , ಕಚೇರಿ ಕ್ಲರ್ಕ್ ಲೋಕಾ ಬಲೆಗೆ
ಈ ಸಭೆಯಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ, ಸಹಕಾರ ಸಚಿವ ಕೆ.ಎನ್. ರಾಜಣ್ಣ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಪಶುಸಂಗೋಪನಾ ಇಲಾಖೆ ಕಾರ್ಯದರ್ಶಿ ಸಲ್ಮಾ ಫಾಹಿಂ, ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಜಗದೀಶ್, KMF ನಿರ್ದೇಶಕ ಹೆಚ್.ಡಿ.ರೇವಣ್ಣ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮಾಲೂರು ಶಾಸಕ ನಂಜೇಗೌಡರು ಮತ್ತಿತರರು ಭಾಗವಹಿಸಿದ್ದರು.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ