‘ನಂದಿನಿ’ ಹಾಲಿನ ದರ ಪ್ರತಿ ಲೀಟರ್ ಗೆ 3 ರು ಹೆಚ್ಚಳ : ಗ್ರಾಹಕರಿಗೆ ಬರೆ

Team Newsnap
1 Min Read

ಬೆಂಗಳೂರು: ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 3 ರು ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.

ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಹಾಲು ಒಕ್ಕೂಟಗಳು ಹಾಗೂ ಕೆಎಂಎಫ್‌ ಅಧ್ಯಕ್ಷರೊಂದಿಗೆ ನಡೆಸಿದ ಸಭೆಯಲ್ಲಿ ಹಾಲು ಒಕ್ಕೂಟಗಳು ನೀಡಿದ್ದ ನಂದಿನಿ ದರ 5 ರು ಹೆಚ್ಚಳ ಪ್ರಸ್ತಾನೆಯ ಬಗ್ಗೆ ಮಹತ್ವದ ಚರ್ಚೆಯನ್ನು ನಡೆಸಿದರು.

ನಂದಿನಿ ಹಾಲಿನ ಪುಡಿಯ ದರವನ್ನು ಹೆಚ್ಚಳದ ಬಗ್ಗೆಯೂ ಚರ್ಚೆ ನಡೆಸಲಾಯಿತು.

WhatsApp Image 2023 07 21 at 9.21.34 PM

ಈ ಸಭೆಯಲ್ಲಿ ನಂದಿನಿ ಹಾಲಿನ ಪ್ರತಿ ಲೀಟರ್ ದರವನ್ನು ರೂ.3 ಹೆಚ್ಚಳ ಮಾಡುವ ನಿರ್ಧಾರವನ್ನು ಕೈಗೊಂಡಿದ್ದಾರೆ.7 ಸಾವಿರ ರು ಲಂಚ ಸ್ವೀಕಾರ ವೇಳೆ ಹಾವೇರಿ ಡಿಡಿಪಿಐ , ಕಚೇರಿ ಕ್ಲರ್ಕ್ ಲೋಕಾ ಬಲೆಗೆ

ಈ ಸಭೆಯಲ್ಲಿ ಕೆಎಂಎಫ್‌ ಅಧ್ಯಕ್ಷ ಭೀಮಾ ನಾಯ್ಕ, ಸಹಕಾರ ಸಚಿವ ಕೆ.ಎನ್. ರಾಜಣ್ಣ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್‌ ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್‌ ಪ್ರಸಾದ್‌, ಪಶುಸಂಗೋಪನಾ ಇಲಾಖೆ ಕಾರ್ಯದರ್ಶಿ ಸಲ್ಮಾ ಫಾಹಿಂ, ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ಜಗದೀಶ್‌, KMF ನಿರ್ದೇಶಕ ಹೆಚ್.ಡಿ.ರೇವಣ್ಣ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮಾಲೂರು ಶಾಸಕ ನಂಜೇಗೌಡರು ಮತ್ತಿತರರು ಭಾಗವಹಿಸಿದ್ದರು.

Share This Article
Leave a comment