ಪ್ರಧಾನ ಮಂತ್ರಿ ಆವಾಸ್ ಯೋಜನೆ: ಪಿಎಂ ಸ್ವನಿಧಿ, ಬೀದಿ ಬದಿ ವ್ಯಾಪಾರಿ ಗಳಿಗೆ ಸಾಲ ಸೌಲಭ್ಯ ಕೊಡಿ – ಡಿಸಿ ರೋಹಿಣಿ

Team Newsnap
1 Min Read

ಪ್ರಧಾನ ಮಂತ್ರಿ ಆವಾಸ್ ಯೋಜನೆ ನಗರ, ಪಿಎಂ ಸ್ವನಿಧಿ ಬೀದಿ ಬದಿ ವ್ಯಾಪಾರಿಗಳ ಕಿರು ಸಾಲ ಸೌಲಭ್ಯ ಯೋಜನೆ ಹಾಗೂ ಸಫಾಯಿ ಕರ್ಮಚಾರಿಗಳ ಸಮೀಕ್ಷೆ ಕುರಿತಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅಧ್ಯಕ್ಷತೆಯಲ್ಲಿ ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ಜರುಗಿರು.

ಈ ವೇಳೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮಾತನಾಡಿ, ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಲ್ಲಿ ಫೆಬ್ರವರಿ ತಿಂಗಳ ಒಳಗಾಗಿ ಗರಿಷ್ಠ ಗುರಿಯನ್ನು ಸಾಧಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೋವಿಡ್‌ -19 ಸೋಂಕಿನಿಂದಾಗಿ ಬೀದಿ ಬದಿ ವ್ಯಾಪಾರಿಗಳ ಜೀವನ ಸಂಕಷ್ಟಕ್ಕೆ ಸಿಲುಕಿದೆ. ಹೀಗಾಗಿ ಬೀದಿ ಬದಿ ವ್ಯಾಪಾರಿಗಳ ಆರ್ಥಿಕ ಸಬಲೀಕರಣಕ್ಕಾಗಿ ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯಡಿ ಸಿಗುವಂಥ ವಿಶೇಷ ಕಿರು ಸಾಲ ಸೌಲಭ್ಯವನ್ನು ನಿಗಧಿತ ಅವಧಿವಲ್ಲಿ ನೀಡುವಂತೆ ಬ್ಯಾಂಕ್ ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲೆಯಲ್ಲಿ ಸಫಾಯಿ ಕರ್ಮಚಾರಿ ವೃತ್ತಿಯಲ್ಲಿ ತೊಡಗಿಕೊಂಡಿರುವವರಿಗೆ ಸಿಗುವಂತಹ ಸೌಲಭ್ಯ ದೊರಕಿಸುವ ಸಲುವಾಗಿ ಸಮೀಕ್ಷಾ ಕಾರ್ಯ ಈಗಾಗಲೇ ನಡೆದಿದೆ, ಸಮೀಕ್ಷೆಯನ್ನು ಮತ್ತೊಮ್ಮೆ ಪರಿಶೀಲಿಸಿ ವರದಿ ಸಲ್ಲಿಸಿ ಎಂದು ಸೂಚಿಸಿದರು.

ಸಮೀಕ್ಷೆ ಕುರಿತಂತೆ ಮೊದಲಿಗೆ ಬನ್ನೂರು, ತಿ.ನರಸೀಪುರ ಆದ ಬಳಿಕ ಮೈಸೂರು ನಗರ ಪಾಲಿಕೆ ಮುಗಿದ ನಂತರ ನಂಜನಗೂಡಿನಲ್ಲಿ ಸಮೀಕ್ಷಾ ಕಾರ್ಯ ಪ್ರಾರಂಭಿಸಿ ಎಂದು ಅಧಿಕಾರಿಗಳಿಗೆ ಹೇಳಿದರು.

ಸಭೆಯಲ್ಲಿ ನಗರ ಪಾಲಿಕೆ ಆಯುಕ್ತರಾದ ಗುರುದತ್ ಹೆಗಡೆ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಷಾದ್ ಆರ್. ಷರೀಫ್, ಎನ್‌ಎಸ್‌ಕೆ‌ಎಫ್‌ಡಿ ಜಿಲ್ಲಾ ಸಂಯೋಜಕರಾದ ಪುಷ್ಪಲತಾ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Share This Article
Leave a comment