ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು
ಮಾಜಿ ಪ್ರಧಾನಿಗೆ ಹಾಲಿ ಪ್ರಧಾನಿ ತುಂಬು ಆತ್ಮೀಯತೆಯಿಂದ ಸ್ವಾಗತಿಸಿದ ರೀತಿ ಸಾಕಷ್ಟು ಪ್ರಶಂಸೆಗೆ ಕಾರಣವಾಗಿದೆ.
ಈ ವರ್ಷದ ಚಳಿಗಾಲದ ಅಧಿವೇಶನ ಹಿನ್ನೆಲೆ ಹೆಚ್.ಡಿ. ದೇವೇಗೌಡ ಸಂಸತ್ತಿಗೆ ಆಗಮಿಸಿದ್ದಾರೆ. ಈ ವೇಳೆ ಅಧಿವೇಶನದ ಅವಧಿ ಮುಗಿದ ಮೇಲೆ ಸಂಸತ್ತಿನಲ್ಲಿ ಪ್ರಧಾನಿ ಮೋದಿ ಭೇಟಿಗೆ ತೆರಳಿದ್ದಾರೆ.
ಈ ವೇಳೆ ಮಾಜಿ ಪ್ರಧಾನಿಯ ಭೇಟಿಗೆ ಉತ್ಸುಕತೆಯಿಂದ ಕಾದಿದ್ದ ಮೋದಿ ದೇವೇಗೌಡ ಬರುತ್ತಿದ್ದಂತೆ ಅವರನ್ನು ಕೈ ಹಿಡಿದು ಕರೆದುಕೊಂಡು ಬಂದಿದ್ದಾರೆ.
ದೇವೆಗೌಡರಿಗೆ ಮೀಸಲಿರಿಸಿದ್ದ ಕುರ್ಚಿಯನ್ನು ಸರಿ ಮಾಡಿ ಕೈ ಹಿಡಿದು ಕೂರಿಸಿದ್ದಾರೆ. ಈ ಪೋಟೋಗಳನ್ನು ಅವರು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದು ಮಾಜಿ ಪ್ರಧಾನಿಯವರ ಜೊತೆ ಒಂದು ಸುಂದರ ಭೇಟಿ ಮಾಡಿದೆ ಎಂದು ಬರೆದುಕೊಂಡಿದ್ದಾರೆ.
ಪ್ರಸಕ್ತ ವರ್ಷದ ಸಂಸತ್ತು ಚಳಿಗಾಲ ಅಧಿವೇಶನ ನೆನ್ನೆಯಿಂದ ಶುರುವಾಗಿದೆ. ಡಿಸೆಂಬರ್ 23ರ ವರೆಗೆ ನಡೆಯಲಿರೋ ಈ ಅಧಿವೇಶನದಲ್ಲಿ 29ಕ್ಕೂ ಹೆಚ್ಚು ಮಸೂದೆಗಳು ಮಂಡನೆಯಾಗೋ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
- ಜಲಗಾರ ಮತ್ತು ಕಾಲ ಜ್ಞಾನಿ ಕನಕ ನಾಟಕಗಳಲ್ಲಿ ದೈವ-ದೇಗುಲ ಸಂಕಥನ
- ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
- ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
More Stories
ಜಲಗಾರ ಮತ್ತು ಕಾಲ ಜ್ಞಾನಿ ಕನಕ ನಾಟಕಗಳಲ್ಲಿ ದೈವ-ದೇಗುಲ ಸಂಕಥನ
ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು