ಪ್ರಧಾನ ಮಂತ್ರಿ ಮೋದಿ ಎರಡು ದಿನಗಳ ಕಾಲ ಮೈಸೂರು ಪ್ರವಾಸ ಮಾಡಲಿದ್ದಾರೆ . ಜೂನ್ 20 ರಂದು ಬೆಂಗಳೂರಿನಿಂದ ಮೈಸೂರಿಗೆ ವಿಶೇಷ ವಿಮಾನದಲ್ಲಿ ಸಂಜೆ 4.55 ಕ್ಕೆ ಮೈಸೂರು ತಲುಪಲಿದ್ದಾರೆ.
ವಿಮಾನ ನಿಲ್ದಾಣದಿಂದ ನೇರವಾಗಿ ಮೈಸೂರು ಮಹಾರಾಜ ಕಾಲೇಜ್ ಮೈದಾನದಲ್ಲಿ ನಡೆಯಲಿರುವ ಕೇಂದ್ರ ಸರ್ಕಾರದ ಯೋಜನೆಗಳ ಫಲಾನುಭವಿಗಳ ಜೊತೆ ಸಂವಾದದಲ್ಲಿ ಭಾಗಿಯಾಗಲಿದ್ದಾರೆ. ಸಂಜೆ 5 ಗಂಟೆಯಿಂದ 6.15 ರವರೆಗೆ ಸಂವಾದ ಕಾರ್ಯಕ್ರಮ ನಡೆಯಲಿದೆ.
ಒಂದು ಕಾಲು ಗಂಟೆಯ ಸಂವಾದ ಮುಗಿಸಿ ಅಲ್ಲಿಂದ ನೇರವಾಗಿ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ ಸುತ್ತೂರು ಶ್ರೀಗಳ ಆಶೀರ್ವಾದ ಪಡೆಯಲಿದ್ದಾರೆ.
ಮಠದಿಂದ ನೇರವಾಗಿ ಚಾಮುಂಡಿ ಬೆಟ್ಟಕ್ಕೆ ತೆರಳಿ ಶ್ರೀ ಚಾಮುಂಡಿ ತಾಯಿಯ ದರ್ಶನ ಪಡೆಯಲಿದ್ದಾರೆ. ಚಾಮುಂಡಿ ಬೆಟ್ಟಕ್ಕೆ ರಾತ್ರಿ 7.30 ಕ್ಕೆ ಸರಿಯಾಗಿ ಆಗಮಿಸಲಿರುವ ಪ್ರಧಾನಿ, 15 ನಿಮಿಷ ಬೆಟ್ಟದಲ್ಲಿ ಇರಲಿದ್ದಾರೆ. ತಾಯಿ ದರ್ಶನ ಮುಗಿಸಿ ರಾಡಿಸನ್ ಹೋಟೆಲ್ ನಲ್ಲಿ ವಾಸ್ತವ್ಯ .
ಜೂನ್ 21 ರಂದು ಬೆಳಗ್ಗೆ 6.30 ಕ್ಕೆ ಮೈಸೂರು ಅರಮನೆಯಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಯೋಗ ದಿನದಲ್ಲಿ ಭಾಗಿಯಾಗಲಿದ್ದಾರೆ. ಬೆಳಗ್ಗೆ 6.30ಕ್ಕೆ ಆರಂಭವಾಗುವ ಯೋಗ 7.45 ಕ್ಕೆ ಮುಕ್ತಾಯವಾಗಲಿದೆ.
ಇದನ್ನು ಓದಿ –ಸೇನೆಗೆ ಪುಂಡರ ಅಗತ್ಯವಿಲ್ಲ, ರೈಲು ಸುಡುವವರು ಸೇನೆಗೆ ಸೂಕ್ತರಲ್ಲ: ಮಾಜಿ ಜನರಲ್ ವಿಪಿ ಮಲೀಕ್
ಕಾರ್ಯಕ್ರಮದ ನಂತರ ಯದುವಂಶದ ಪ್ರಮೋದಾದೇವಿ ಒಡೆಯರ್, ಯದುವೀರ್ ಅವರನ್ನು ಅರಮನೆಯ ಹಿಂಭಾಗದಲ್ಲಿನ ರಾಜವಂಶಸ್ಥರ ಮನೆಯಲ್ಲೆ ಭೇಟಿಯಾಗುವ ಸಾಧ್ಯತೆ ಇದೆ.
ನಂತರ ಅಲ್ಲಿಂದ ನೇರವಾಗಿ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಅಲ್ಲಿಂದ ವಿಶೇಷ ವಿಮಾನದಲ್ಲಿ ಕೇರಳಕ್ಕೆ ತೆರಳಲಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು