ಒನಕೆ ಓಬವ್ವರ ಜಯಂತಿ:ಕನ್ನಡದಲ್ಲೇ ಟ್ವೀಟ್ ಮಾಡಿದ ಪ್ರಧಾನಿ ಮೋದಿ

Team Newsnap
0 Min Read

ಇಂದು(ನವೆಂಬರ್ 11ರಂದು)ಒನಕೆ ಓಬವ್ವ ಜಯಂತಿ ಆಚರಿಸಲು ರಾಜ್ಯ ಸರ್ಕಾರದ ಆದೇಶ ಹಿನ್ನೆಲೆಯಲ್ಲಿ ನಾಡಿನಾದ್ಯಂತ ಒನಕೆ ಓಬವ್ವ ಜಯಂತಿ ಆಚರಣೆ ಮಾಡಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ವೀರವನಿತೆ ಒನಕೆ ಓಬವ್ವ ಅವರನನ್ನು ನೆನಪಿಸಿಕೊಂಡು
ಕನ್ನಡ ಹಾಗೂ ಇಂಗ್ಲಿಷ್​ನಲ್ಲಿ ಟ್ವೀಟ್ ಮಾಡಿದ್ದಾರೆ.

ವೀರವನಿತೆ ಒನಕೆ ಓಬವ್ವ ಜಯಂತಿಯ ವಿಶೇಷ ಸಂದರ್ಭದಲ್ಲಿ ಅವರಿಗೆ ನಮನ ಸಲ್ಲಿಸುತ್ತೇನೆ. ತನ್ನ ಜನರು ಮತ್ತು ಸಂಸ್ಕೃತಿಯನ್ನು ರಕ್ಷಿಸಲು ಅವರು ತೋರಿದ ಧೈರ್ಯವನ್ನು ಎಂದಿಗೂ ಯಾರೊಬ್ಬರೂ ಮರೆಯಲು ಸಾಧ್ಯವಿಲ್ಲ. ಅವರು ನಮ್ಮ ನಾರಿ ಶಕ್ತಿಯ ಪ್ರತೀಕವಾಗಿ ನಮಗೆ ಸ್ಫೂರ್ತಿ ನೀಡುತ್ತಾರೆ ಎಂದು ಮೋದಿ ಬಣ್ಣಿಸಿದ್ದಾರೆ.

Share This Article
Leave a comment