January 11, 2025

Newsnap Kannada

The World at your finger tips!

neet,pg,exam

NEET-PG 2021 - Counseling for 1,456 seats only: Supreme

ಪ್ರಧಾನಿ ಮೋದಿ ಭದ್ರತಾ ಲೋಪ ಪ್ರಕರಣ : ನಾಳೆ ಸುಪ್ರೀಂ ಕೋರ್ಟ್​​​ನಲ್ಲಿ ವಿಚಾರಣೆ

Spread the love

ಪಂಜಾಬ್​ ಪ್ರವಾಸದ ಸಂದರ್ಭದಲ್ಲಿ ಪ್ರಧಾನಿ ಮೋದಿಯವರ ಭದ್ರತೆ ವಿಚಾರದಲ್ಲಿ ಅತಿದೊಡ್ಡ ಲೋಪವಾಗಿದೆ. ಈ ಕುರಿತಂತೆ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್​​ಗೆ ಸಲ್ಲಿಕೆ ಮಾಡಲಾಗಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀ ಕೋರ್ಟ್ ಸಮ್ಮತಿ ಸೂಚಿಸಿ, ಅರ್ಜಿಯ ವಿಚಾರಣೆ ನಾಳೆ ನಡೆಯಲಿದೆ.

ಲಾಯರ್ಸ್​​ ವಾಯ್ಸ್​​ ಸಲ್ಲಿಸಿದ ಅರ್ಜಿ ವಿಚಾರಣೆ ಪಂಜಾಬ್​ನಲ್ಲಿ ನಡೆದ ಭದ್ರತಾ ಲೋಪದ ಘಟನೆ ಹಿನ್ನೆಲೆಯಲ್ಲಿ ಪ್ರಧಾನಿಗಳ ಭದ್ರತೆಯ ವಿಚಾರದಲ್ಲಿ ಮುಂದಿನ ದಿನಗಳಲ್ಲಿ ಇಂತಹ ಯಾವುದೇ ರೀತಿಯ ಲೋಪವಾಗದಂತೆ ಕ್ರಮಕೈಗೊಳ್ಳಲು ಕೋರಿ ಸುಪ್ರೀ ಕೋರ್ಟ್​​ಗೆ ಅರ್ಜಿ ಸಲ್ಲಿಕೆಯಾಗಿದೆ.

ಹಿರಿಯ ವಕೀಲ ಮಣಿಂದರ್ ಸಿಂಗ್ ಪಂಜಾಬ್​ನ ಫಿರೋಜ್​ಪುರದಲ್ಲಿ ಬುಧವಾರ ಪ್ರಧಾನಿಗಳು ಭದ್ರತೆ ವಿಚಾರದಲ್ಲಿ ಅತಿದೊಡ್ಡ ಲೋಪವಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ವಕೀಲರ ಅರ್ಜಿಯನ್ನು ಸ್ವೀಕರಿಸಿದ ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿ ಎನ್​.ವಿ.ರಮಣ ನೇತೃತ್ವದ ಪೀಠ ಅರ್ಜಿಯ ವಿಚಾರಣೆಗೆ ಸಮ್ಮತಿ ಸೂಚಿಸಿದೆ. ಅಲ್ಲದೇ ನಾಳೆಯ ವಿಚಾರಣೆ ಸಂದರ್ಭದಲ್ಲಿ ಮೊದಲು ಈ ಪ್ರಕರಣವನ್ನೇ ಕೈಗೆತ್ತಿಕೊಳ್ಳುತ್ತೇವೆ ಎಂದು ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್, ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠ ಹೇಳಿದೆ.

Copyright © All rights reserved Newsnap | Newsever by AF themes.
error: Content is protected !!