ಚನ್ನಪಟ್ಟಣಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನಲೆಯಲ್ಲಿ ಮೈಸೂರು ಮತ್ತು ಬೆಂಗಳೂರು ನಡುವಿನ ದಶಪಥ ಹೆದ್ದಾರಿ ಮಾರ್ಗದಲ್ಲಿ ಸಂಚಾರ ಬದಲಾವಣೆ ಆಗಲಿದೆ.
ಬೆಂಗಳೂರಿನಿಂದ ಮೈಸೂರಿಗೆ ಹೊರಡುವ ವಾಹನಗಳು ಬಿಡದಿ- ಹಾರೋಹಳ್ಳಿ- ಕನಕಪುರ-ಮಳವಳ್ಳಿ ಮಾರ್ಗವಾಗಿ ಮೈಸೂರು ಪ್ರಯಾಣ ಮಾಡಬಹುದು. ಮೈಸೂರಿನಿಂದ ಬರುವ ವಾಹನಗಳು ಮದ್ದೂರು- ಕುಣಿಗಲ್-ನೆಲಮಂಗಲ ಮಾರ್ಗವಾಗಿ ಬೆಂಗಳೂರಿಗೆ ತಲುಪಬಹುದು.
ಮಾರ್ಗ ಬದಲಾವಣೆ ಮಾಡಿ ರಾಮನಗರ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಏಪ್ರಿಲ್ 30ರ ಬೆಳಗ್ಗೆ 11 ರಿಂದ ಸಂಜೆ 4 ಗಂಟೆವರೆಗೆ ಎಕ್ಸ್‌ಪ್ರೆಸ್ ಹೈವೆ ಬಂದ್ ಆಗಲಿದೆ.
ಏ.30 ರಂದು ಚನ್ನಪಟ್ಟಣಕ್ಕೆ ಮೋದಿ ಭೇಟಿ ನೀಡಿದರೆ, ಮೇ 4 ರಂದು ಕನಕಪುರಕ್ಕೆ ಅಮಿತ್ ಷಾ ಭೇಟಿ ಕೊಡಲಿದ್ದಾರೆ. ರಾಮನಗರ ಜಿಲ್ಲೆಯಲ್ಲಿ ನಾಲ್ಕು ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ಇದೆ ಎಂದು ರಾಮನಗರದಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಶ್ವತ್ಥ ನಾರಾಯಣ ಹೇಳಿದರು.
ಏಪ್ರಿಲ್ 30 ಭಾನುವಾರ ಆಗಿದ್ದು, ಅಂದು ವಾಹನ ದಟ್ಟಣೆ ಹೆಚ್ಚಳವಾಗಿ ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯತೆ ದಟ್ಟವಾಗಿದೆ.
- ಜಲಗಾರ ಮತ್ತು ಕಾಲ ಜ್ಞಾನಿ ಕನಕ ನಾಟಕಗಳಲ್ಲಿ ದೈವ-ದೇಗುಲ ಸಂಕಥನ
- ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
- ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
More Stories
ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು