ಪ್ರಧಾನಿ ನರೇಂದ್ರ ಮೋದಿಯವರು ನ 11 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ನವೆಂಬರ್ 11 ರ ಗುರುವಾರ ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸಿ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸುದ್ದಿಗಾರರಿಗೆ ಈ ವಿಷಯ ತಿಳಿಸಿ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ 2 ನೇ ಟರ್ಮಿನಲ್ ನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ.
ವಿಮಾನ ನಿಲ್ದಾಣದ ಆವರಣದಲ್ಲಿ ನಿರ್ಮಾಣವಾಗಿರುವ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ ಎಂದರು.
ಮೋದಿ ಬೆಂಗಳೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸಭೆ ನಡೆಸಿದರು. ಸಭೆಯಲ್ಲಿ ಮಾಜಿ ಸಚಿವ ಡಿ.ವಿ ಸದಾನಂದಗೌಡ, ಸಚಿವ ಅಶ್ವಥ್ ನಾರಾಯಣ್ ಮತ್ತಿತರಿದ್ದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು