March 16, 2025

Newsnap Kannada

The World at your finger tips!

DK

ಬೆಂಗಳೂರು ಹೊರತಾಗಿ ಇತರ ಭಾಗಗಳಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಆದ್ಯತೆ: ಡಿ.ಕೆ. ಶಿವಕುಮಾರ್

Spread the love

ಬೆಂಗಳೂರು, ಫೆಬ್ರವರಿ 11: ಬೆಂಗಳೂರಿನ ಜನಸಂಖ್ಯೆ ಹಾಗೂ ವಾಹನಗಳ ಪ್ರಮಾಣ ಹೆಚ್ಚುತ್ತಿರುವುದರಿಂದ, ಕೈಗಾರಿಕೆಗಳ ವಿಸ್ತರಣೆಯನ್ನು ರಾಜಧಾನಿ ಹೊರತಾಗಿ ಇತರ ಭಾಗಗಳಿಗೆ ಕೇಂದ್ರೀಕರಿಸಲು ಸರ್ಕಾರ ಆದ್ಯತೆ ನೀಡಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಈ ಕುರಿತಂತೆ ಜಿಮ್ ಸಮಾವೇಶದಲ್ಲಿ ನೂತನ ಕೈಗಾರಿಕಾ ನೀತಿ ಪ್ರಕಟಿಸಲಾಗುವುದು. ಬೆಂಗಳೂರಿನ ಜನಸಂಖ್ಯೆ 1.40 ಕೋಟಿಗೆ ತಲುಪಿದ್ದು, ನಗರದಲ್ಲಿ ವಾಹನಗಳ ಸಂಖ್ಯೆ 1.10 ಕೋಟಿಯಷ್ಟಾಗಿದೆ. ಇದರಿಂದ ನಗರದಲ್ಲಿ ಹೆಚ್ಚುತ್ತಿರುವ ಒತ್ತಡವನ್ನು ಕಡಿಮೆ ಮಾಡಲು ಕೈಗಾರಿಕೆಗಳನ್ನು ರಾಜ್ಯದ ಇತರ ಭಾಗಗಳಲ್ಲಿ ವಿಸ್ತರಿಸುವುದು ಅವಶ್ಯಕವಾಗಿದೆ ಎಂದು ಅವರು ಹೇಳಿದರು.

ಬಂಡವಾಳ ಹೂಡಿಕೆದಾರರು ಬೆಂಗಳೂರಿನ ಹೊರತಾಗಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಕೈಗಾರಿಕೆ ಸ್ಥಾಪನೆಗೆ ಮುಂದಾಗಬೇಕು. ಈ ನಿಟ್ಟಿನಲ್ಲಿ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರ ಹೊಸ ಕೈಗಾರಿಕಾ ನೀತಿ ರೂಪಿಸಿದ್ದು, ಸಮಾವೇಶದಲ್ಲಿ ಅದನ್ನು ಘೋಷಣೆ ಮಾಡಲಾಗಿದೆ.ಇದನ್ನು ಓದಿ –ಮೈಸೂರು: ಅವಹೇಳನಕಾರಿ ಪೋಸ್ಟ್ ಹಿನ್ನಲೆಯಲ್ಲಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ – 14 ಪೊಲೀಸರಿಗೆ ಗಾಯ

ಬೆಂಗಳೂರು ಈಗ ಜಾಗತಿಕ ಮಟ್ಟದಲ್ಲಿ ಗುರುತಿಸಲ್ಪಟ್ಟ ನಗರವಾಗಿದ್ದು, ಇಡೀ ವಿಶ್ವ ಭಾರತವನ್ನು ಬೆಂಗಳೂರಿನ ಮೂಲಕ ನೋಡುತ್ತಿದೆ. ಹೆಚ್ಚಿನ ಹೂಡಿಕೆ ಆಕರ್ಷಿಸುವ ಮೂಲಕ ಉದ್ಯೋಗ ಸೃಷ್ಟಿಸಲು ನಾವು ಒಗ್ಗೂಡಿ ಕೆಲಸ ಮಾಡಬೇಕು ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

Copyright © All rights reserved Newsnap | Newsever by AF themes.
error: Content is protected !!