ಚಾಮರಾಜನಗರ: ಚಾಮರಾಜನಗರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಹನೂರು ತಾಲೂಕಿನ ಬಂಡಳ್ಳಿ ಹೊರವಲಯದ ತೆಳ್ಳನೂರು ರಸ್ತೆಯಲ್ಲಿ ನಿನ್ನೆ ರಾತ್ರಿ ನಡೆದಿದೆ.
ನಿನ್ನೆ ನಿಶ್ಚಿತಾರ್ಥ ಕಾರ್ಯಕ್ರಮಕ್ಕಾಗಿ ಖಾಸಗಿ ಬಸ್‌ನಲ್ಲಿ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹಳ್ಳಿಯೊಂದಕ್ಕೆ ಜನರು ತೆರಳಿದ್ದರು. ಕಾರ್ಯಕ್ರಮ ಮುಗಿಸಿ ಶಾಗ್ಯ ಗ್ರಾಮಕ್ಕೆ ಹಿಂತಿರುಗುವ ವೇಳೆ, ಬಂಡಳ್ಳಿ-ತೆಳ್ಳನೂರು ಮಾರ್ಗದ ಕಾಯಿ ಒಡೆಯುವ ಕಲ್ಲಿನ ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ಪಲ್ಟಿಯಾಗಿದೆ.
ಅಪಘಾತದಲ್ಲಿ ಬಸ್ ಕ್ಲೀನರ್ ನವೀನ್ ಬಸ್ಸಿನ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬಸ್‌ನಲ್ಲಿ ಇದ್ದ 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಸ್ಥಳೀಯರು ತಕ್ಷಣ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಘಟನೆ ಕುರಿತಾಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು