ಪಾವಗಡ ಬಳಿ ಖಾಸಗಿ ಬಸ್​​ ಪಲ್ಟಿ: 8 ಮಂದಿ ದುರ್ಮರಣ – 25 ಕ್ಕೂ ಹೆಚ್ಚು ಮಂದಿಗೆ ಗಾಯ

Team Newsnap
0 Min Read

ಗ್ರಾಮದ ತಿರುವೊಂದರ ಬಳಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ‍8 ಮಂದಿ ಸಾವನ್ನಪ್ಪಿದ್ದಾರೆ 25 ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಪಾವಗಡ ತಾಲ್ಲೂಕಿನ ಪಳವಳ್ಳಿ ಕಟ್ಟೆ ಬಳಿ ಶನಿವಾರ ಬೆಳಿಗ್ಗೆ ಸಂಭವಿಸಿದೆ

ಸಧ್ಯದ ಮಾಹಿತಿ ಪ್ರಕಾರ ಈ ಭೀಕರ ಅಪಘಾತದಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ. ಇನ್ನು ಸಾವಿನ ಸಂಖ್ಯೆ ಏರೋ ಸಾಧ್ಯತೆ ಇದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗುತ್ತಿದೆ.

ಕಾಲೇಜು ವಿದ್ಯಾಥಿ೯ಗಳು ಹಾಗೂ ಮಹಿಳೆಯರೂ ಸೇರಿದಂತೆ 40ಕ್ಕೂ ಹೆಚ್ಚು ಮಂದಿ ಬಸ್​ನಲ್ಲಿ ಪ್ರಯಾಣಿಸುತ್ತಿದ್ದರು

ಪಾವಗಡ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Share This Article
Leave a comment