ಖಾಸಗಿ ಕಾಲೇಜಿನ ಉಪನ್ಯಾಸಕರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ರಿ ಯಲ್ಲಿ ನಡೆದಿದೆ.
ಗದಗ ಜಿಲ್ಲೆಯ ರೋಣ ನಿವಾಸಿಯಾಗಿರುವ ವೆಂಕಟೇಶ್ ಎಂಬುವವರೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹೆಬ್ರಿ ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ವೆಂಕಟೇಶ್ ಗೆ ಲಾಕ್ ಡೌನ್ ವೇಳೆಯಲ್ಲಿ ಕೆಲಸ ಇರಲಿಲ್ಲ. ಅವರ ಪತ್ನಿಯೂ ಕೂಡ ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದಾರೆ .
ಕಳೆದ 5 ವರ್ಷಗಳ ಹಿಂದೆ ಶಿರಸಿ ಮೂಲದ ಯುವತಿಯನ್ನು ಪ್ರೀತಿಸಿ ಮದುವೆಯಾಗಿದೆ. ನಂತರ ಅವರಿಬ್ಬರೂ ಹೆಬ್ರಿಯ ಬಡಗುಡ್ಡೆ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇವರಿಬ್ಬರೂ ಮದುವೆಯಾಗಿದ್ದು ಎರಡೂ ಮನೆಯವರಿಗೆ ಗೊತ್ತಿರಲಿಲ್ಲ.
ಕೆಲಸವಿಲ್ಲದೇ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ವೆಂಕಟೇಶ್ ಇಂದು ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹೆಬ್ರಿ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
- ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶ
- ಹಾಲಿನ ದರ ಏರಿಕೆ? ಶೀಘ್ರದಲ್ಲೇ ಕೆಎಂಎಫ್ ನಿರ್ಣಯ
- ಮೈಸೂರಿನ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು: ಪ್ರತಾಪ್ ಸಿಂಹ-ಯದುವೀರ್ ನಡುವೆ ವಾಕ್ಸಮರ
- ವಾರಕ್ಕೆ 70 ಗಂಟೆ ಕೆಲಸದ ಮೇಲೆ ಉದ್ಯಮಿ ನಮಿತಾ ಥಾಪರ್ ಪ್ರತಿಕ್ರಿಯೆ
- ಸಿಲಿಂಡರ್ ಸ್ಫೋಟ ಪ್ರಕರಣ: ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ದುರ್ಮರಣ
More Stories
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶ
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ