ಖಾಸಗಿ ಶಾಲೆಗಲ್ಲಿ ಶೇ.30ರಷ್ಟು ಶುಲ್ಕ ಕಡಿತ ಮಾಡುವ ಮೂಲಕ ಪೋಷಕರಿಗೆ ಸರ್ಕಾರ ಬಿಗ್ ರಿಲೀಫ್ ಕೊಟ್ಟಿದೆ.
ಈ ಕುರಿತಂತೆ ಶಿಕ್ಷಣ ಇಲಾಖೆ ಇದೀಗ ಅಧಿಕೃತ ಆದೇಶ ಹೊರಡಿಸಿ 2 ಕಂತುಗಳಲ್ಲಿ ಶುಲ್ಕ ಪಾವತಿಗೆ ಅವಕಾಶ ಕಲ್ಪಿಸಲಾಗಿದೆ.
ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಖಾಸಗಿ ಶಾಲೆಗಳಲ್ಲಿ ವಿದ್ಯಾಭ್ಯಾಸವನ್ನು ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶಾಲಾ ಶುಲ್ಕ ಕಡಿತ ಮಾಡುವಂತೆ ಪೋಷಕರು ಸರ್ಕಾರಕ್ಕೆ ಮನವಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಆದೇಶ ಹೊರಡಿಸಿದ್ದರು.
- 2020-21ನೇ ಸಾಲಿನಲ್ಲಿನ ಶಾಲಾ ಶುಲ್ಕ ಪಾವತಿಗೆ ಸಂಬಂಧಿಸಿದಂತೆ ಶೇ.30ರಷ್ಟು ವಿನಾಯಿತಿಯನ್ನು ನೀಡಲಾಗಿದೆ.
- ಶಾಲಾ ಬೋಧನಾ ಶುಲ್ಕವನ್ನು ಹೊರತು ಪಡಿಸಿ ಶಾಲೆಗಳು ಬೇರೆ ಯಾವುದೇ ಶುಲ್ಕವನ್ನು ವಿದ್ಯಾರ್ಥಿಗಳಿಂದ ಪಡೆಯುವಂತಿಲ್ಲ.
- ಒಂದು ವೇಳೆ ಪೋಷಕರು ಪೂರ್ಣ ಶುಲ್ಕ ಪಾವತಿ ಮಾಡಿದ್ದರೆ, ಅಂತಹ ಶುಲ್ಕವನ್ನು ಮುಂದಿನ ಶೈಕ್ಷಣಿಕ ಅವಧಿಗೆ ಹೊಂದಾಣಿಕೆ ಮಾಡಲು ಸೂಚಿಸಲಾಗಿದೆ.
- 2 ಹಂತಗಳಲ್ಲಿ ಶಾಲಾ ಶುಲ್ಕ ಪಾವತಿಗೆ ಅವಕಾಶವನ್ನು ಕಲ್ಪಿಸಲಾಗಿದೆ.
- ಶಿಕ್ಷಣ ಇಲಾಖೆ ಹೊರಡಿಸಿರುವ ಶಾಲಾ ಶುಲ್ಕ ಕಡಿತ ಆದೇಶ ರಾಜ್ಯದಲ್ಲಿರುವ ಎಲ್ಲಾ ಸಿಬಿಎಸ್ಇ, ಐಸಿಎಸ್ ಇ ಹಾಗೂ ರಾಜ್ಯ ಪಠ್ಯಕ್ರಮದಲ್ಲಿ ಪಾಠ ಬೋಧನೆ ಮಾಡುವ ಎಲ್ಲಾ ಶಾಲೆಗಳಿಗೂ ಅನ್ವಯವಾಗಲಿದೆ
- ಇನ್ನು ಶಾಲಾ ಶುಲ್ಕ ಕಡಿತ ಆದೇಶ ಪಾಲನೆಗೆ ಜಿಲ್ಲೆಗಳಲ್ಲಿ ಸಮಿತಿಗಳನ್ನು ರಚಿಸಲು ಶಿಕ್ಷಣ ಇಲಾಖೆ ಮುಂದಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು