ನವದೆಹಲಿ: ವಯನಾಡಿನ ಹೊಸ ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಇಂದು ಸಂಸತ್ತಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಸಂವಿಧಾನದ ಪುಸ್ತಕವನ್ನು ಕೈಯಲ್ಲಿ ಹಿಡಿದು, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಗುರುವಾರ ಲೋಕಸಭೆಯ ಸದಸ್ಯೆಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಉಪಚುನಾವಣೆಗಳಲ್ಲಿ, ಅವರು ಭಾರತೀಯ ಕಮ್ಯುನಿಸ್ಟ್ ಪಕ್ಷದ (ಸಿಪಿಐ) ಅಭ್ಯರ್ಥಿ ಸತ್ಯನ್ ಮೊಕೇರಿಯನ್ನು 4,10,931 ಮತಗಳ ಅಂತರದಿಂದ ಸೋಲಿಸಿದರು.
ವಯನಾಡ್ ಕ್ಷೇತ್ರವು ಕಾಂಗ್ರೆಸ್ ಪಕ್ಷದ ಗಢವಾಗಿದ್ದು, ಈ ಬಾರಿ ಪ್ರಿಯಾಂಕಾ ಗಾಂಧಿ, ಬಿಜೆಪಿಯ ನವ್ಯಾ ಹರಿದಾಸ್ ಮತ್ತು ಸಿಪಿಐನ ಸತ್ಯನ್ ಮೊಕೇರಿ ನಡುವೆ ತ್ರಿಕೋನ ಸ್ಪರ್ಧೆ ನಡೆದಿದೆ.ಇದನ್ನು ಓದಿ –ನಟ ಧನುಷ್ ಮತ್ತು ಐಶ್ವರ್ಯಾ ರಜನಿಕಾಂತ್ ವಿಚ್ಛೇದನಕ್ಕೆ ಕೋರ್ಟ್ ಅನುಮೋದನೆ
ಈ ನಡುವೆ, ನಾಂದೇಡ್ ಲೋಕಸಭಾ ಕ್ಷೇತ್ರದಲ್ಲಿ ನಡೆದ ಉಪಚುನಾವಣೆಯಲ್ಲಿ, ಕಾಂಗ್ರೆಸ್ ಅಭ್ಯರ್ಥಿ ರವೀಂದ್ರ ವಸಂತರಾವ್ ಚವಾಣ್ 5,86,788 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಈ ಸ್ಥಾನ, ಹಾಲಿ ಸಂಸದ ವಸಂತರಾವ್ ಬಲವಂತರಾವ್ ಚವಾಣ್ ಅವರ ನಿಧನದ ಹಿನ್ನೆಲೆಯಲ್ಲಿ ಖಾಲಿಯಾಗಿದೆ.
More Stories
ವಿಮಾನ ಪತನ: ಕೊನೆಯ ಕ್ಷಣದಲ್ಲಿ ಲ್ಯಾಂಡಿಂಗ್ ಗೇರ್ ವೈಫಲ್ಯ; 179 ಮಂದಿ ದುರ್ಮರಣ!
2025ನೇ ಸಾಲಿನ ರೈಲ್ವೆ ಗ್ರೂಪ್-ಡಿ ಹುದ್ದೆಗಳಿಗೆ 32,000ಕ್ಕೂ ಹೆಚ್ಚು ನೇಮಕಾತಿ
ವಿಚಾರ ಕ್ರಾಂತಿಯ ಯುಗಪುರುಷ ಕುವೆಂಪು