ಕೊರೊನಾ ಆತಂಕದ ಹಿನ್ನೆಲೆಯಲ್ಲಿ ಈ ವರ್ಷ ನಡೆಯಬೇಕಿದ್ದ 8ನೇ ಆವೃತ್ತಿ ಪ್ರೊ ಕಬಡ್ಡಿ ಲೀಗ್ ಟೂರ್ನಿಯನ್ನ ಮುಂದಿನ ವರ್ಷಕ್ಕೆ ಮುಂದೂಡಲಾಗಿದೆ ಎಂದು ಲೀಗ್ ಸಂಘಟಕರು ಅಧಿಕೃತವಾಗಿ ಘೋಷಿಸಿದ್ದಾರೆ.
ಟ್ವೀಟ್ ಮೂಲಕ ವಿಷಯ ತಿಳಿಸಿರುವ ಪ್ರೊ ಕಬಡ್ಡಿ ಲೀಗ್ ಸಂಘಟಕರು, ‘ ಸಧ್ಯದ ಪರಿಸ್ಥಿತಿ, ಸರ್ಕಾರದ ಮಾರ್ಗಸೂಚಿಗಳನ್ನ ಗಮನಿಸಿ ಹಾಗೂ ಆಟಗಾರರ ಆರೋಗ್ಯ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ ಪ್ರೊ ಕಬಡ್ಡಿ ಲೀಗ್ ಟೂರ್ನಿಯನ್ನ ಮುಂದೂಡಿಕೆ ಮಾಡಲಾಗುತ್ತಿದೆ. ಟೂರ್ನಿ ನಡೆಸಲು ಸುರಕ್ಷಿತ ವಾತಾವರಣ ನಿರ್ಮಾಣವಾದಾಗ ಮುಂದಿನ ವರ್ಷ ಟೂರ್ನಿಯನ್ನ ಆಯೋಜಿಸಲಾಗುವುದು’ ಎಂದು ತಿಳಿಸಿದ್ದಾರೆ.
ಟೂರ್ನಿಯ ಆಟಗಾರರ ಹರಾಜು ಪ್ರಕ್ರಿಯೆಯನ್ನ ಏಪ್ರಿಲ್‌ನಲ್ಲಿ ನಿಗದಿ ಮಾಡಲಾಗಿತ್ತು. ಆದರೆ ನಂತರದಲ್ಲಿ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿತ್ತು. ಮೂಲ ವೇಳಾಪಟ್ಟಿಯ ಪ್ರಕಾರ ಈ ವರ್ಷ ಜುಲೈನಿಂದ ಅಕ್ಟೋಬರ್ ನಡುವೆ ಟೂರ್ನಿ ನಡೆಯಬೇಕಾಗಿತ್ತು. ಇದಲ್ಲದೆ ಟೂರ್ನಿ ಆಯೋಜನೆಗೆ ಶ್ರೀಲಂಕಾದಿಂದಲೂ ಆಹ್ವಾನ ಬಂದಿತ್ತು. ಆದರೆ ಸಂಘಟಕರು, ಟೂರ್ನಿ ಆಯೋಜಿಸುವುದಿದ್ದರೆ ಅದು ಭಾರತದಲ್ಲಿ ಮಾತ್ರ ಎಂದು ಸ್ಪಷ್ಟಪಡಿಸಿದ್ದರು.
- ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
- MUDA ಹಗರಣ: ಜೆಡಿಎಸ್ ಶಾಸಕ ಜಿಟಿಡಿ ವಿರುದ್ಧ ಕಿಕ್ಬ್ಯಾಕ್ ಆರೋಪ, ಲೋಕಾಯುಕ್ತದಲ್ಲಿ ದೂರು
- ನಕಲಿ ಸಿಗರೇಟ್ ತಯಾರಿಸಿ ಮಾರಾಟ – ಕೋಟಿ ಮೌಲ್ಯದ ಸಿಗರೇಟ್ ವಶ
- ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
- ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
More Stories
ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ