Karnataka

ನನ್ನ ರಾಜಕೀಯ ಜೀವನ ಪ್ರವೇಶಕ್ಕೆ ಪ್ರೊ. ನಂಜುಂಡಸ್ವಾಮಿಯವರೇ ಕಾರಣ – ಸಿಎಂ

ಸ್ಕೂಟರ್ ನಲ್ಲಿ ಓಡಾಡುತ್ತಿದ್ದ ನೆನಪು ಹಂಚಿಕೊಂಡ ಸಿಎಂ

ಟಿ.ಎನ್.ಸೀತಾರಾಂ ಬದುಕಿನ ವಿವಿಧ ಸ್ತರಗಳ ಅನುಭವವಿರುವ ಕ್ರಿಯಾಶೀಲ ವ್ಯಕ್ತಿ – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ನಿರ್ದೇಶಕ ಟಿ.ಎನ್.ಸೀತಾರಾಂ ಅವರೊಂದಿಗೆ 40 ವರ್ಷಗಳ ಒಡನಾಟವಿದೆ, ಇವರು ಬದುಕಿನ ವಿವಿಧ ಸ್ತರಗಳ ಅನುಭವವಿರುವ ಕ್ರಿಯಾಶೀಲ ವ್ಯಕ್ತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ತಿಳಿಸಿದರು.

ಟಿ.ಎನ್.ಸೀತಾರಾಂ ಅವರ ನೆನಪಿನ ಪುಟಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಟಿ.ಎನ್.ಸೀತಾರಾಂ ಸುಮಾರು 40 ವರ್ಷಗಳ ಒಡನಾಟವಿರುವ ಆಪ್ತಸ್ನೇಹಿತ. ನಾನು ಲಂಕೇಶ್ ಪತ್ರಿಕಾಲಯಕ್ಕೆ ಭೇಟಿ ನೀಡುತ್ತಿದ್ದೆ. ಕಾನೂನು ವಿದ್ಯಾರ್ಥಿಯಾಗಿದ್ದಾಗ ಪ್ರೊ. ನಂಜುಂಡಸ್ವಾಮಿಯವರು ಕಾನೂನು ಕಾಲೇಜಿನ ಪ್ರಾಧ್ಯಾಪಕರಾಗಿದ್ದರು. ಆಗ ರಾಜಕೀಯ ಕ್ಷೇತ್ರದಲ್ಲಿ ಆಸಕ್ತಿಯಿದ್ದ ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸುತ್ತಿದ್ದರು. ಸಮಾಜವಾದಿ ಯುವಜನಸಭಾದಲ್ಲಿ ನಾನು ಸದಸ್ಯನಾಗಲು ನೆರವಾದರು. 1971 ರಲ್ಲಿ ವೀರೆಂದ್ರ ಪಾಟೀಲ್ ಮುಖ್ಯಮಂತ್ರಿಯಾಗಿದ್ದಾಗ, ಸರ್ಕಾರದ ವಿರುದ್ಧ ನಡೆದ ಚಳವಳಿಯಲ್ಲಿ ನಾನು ಭಾಗಿಯಾಗಿದ್ದೆ. ನನ್ನ ರಾಜಕೀಯ ಜೀವನ ಪ್ರಾರಂಭವಾಗಲು ಪ್ರೊ. ನಂಜುಂಡಸ್ವಾಮಿಯವರೇ ಕಾರಣ ಎಂದರು.

ಸ್ಕೂಟರ್ ನಲ್ಲಿ ಓಡಾಡುತ್ತಿದ್ದ ನೆನಪು

ಜನತಾಪಾರ್ಟಿಯಲ್ಲಿ ಪದಾಧಿಕಾರಿಯಾಗಿ ಕಾರ್ಯನಿರ್ವಹಿಸಿ, ಪಕ್ಷದ ನಾಯಕರು ನನಗೆ ಪ್ರೋತ್ಸಾಹ ನೀಡಿದರು. ನಂತರ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆ ಗೆದ್ದ ನಂತರ ರಾಮಕೃಷ್ಣ ಹೆಗಡೆಯವರಿಗೆ ಬೆಂಬಲ ಸೂಚಿಸಿದ ನಂತರ ಕಾವಲು ಸಮಿತಿಯ ಅಧ್ಯಕ್ಷನಾಗಿ ಕಾರ್ಯನಿರ್ವಹಿಸಿದೆ. 1984 ರಲ್ಲಿ ರೇಷ್ಮೆ ಸಚಿವನಾಗಿ ಕೆಲಸ ಮಾಡಿದೆ. 1985 ರಲ್ಲಿ ಜನತಾದಳದ ಪರವಾಗಿ ನಿಂತು ಜಯ ಸಾಧಿಸಿದ ನಂತರ ಪಶುಸಂಗೋಪನೆ ಸಚಿವನಾಗಿ ಕೆಲಸ ನಿರ್ವಹಿಸಿದೆ. ಆ ಸಂದರ್ಭದಲ್ಲಿ ಕಾರಣಾತರಗಳಿಂದ ಸಚಿವ ಸ್ಥಾನ ಕಳೆದುಕೊಳ್ಳಬೇಕಾಯಿತು. ಆ ಸಂದರ್ಭದಲ್ಲಿ ತನ್ನ ಬಳಿಯಿದ್ದ ಸ್ಕೂಟರ್ ನಲ್ಲಿ ಓಡಾಡುತ್ತಿದ್ದ ನೆನಪುಗಳನ್ನು ಮುಖ್ಯಮಂತ್ರಿಯವರು ಸ್ಮರಿಸಿಕೊಂಡರು.

ಬಹುಮುಖ ಪ್ರತಿಭೆ:

ಟಿ.ಎನ್.ಸೀತಾರಾಂ ಅವರು ಬದುಕಿನ ಎಲ್ಲ ಸ್ತರಗಳ ಅನುಭವ ಇರುವವರು. ಅವರ ವಿದ್ಯಾರ್ಥಿ ದೆಸೆ, ಸ್ನೇಹಿತರ ಒಡನಾಟ, ರಾಜಕೀಯ , ಕಲಾ ಸೇವೆಯಲ್ಲಿ ತೊಡಗಿರುವ ಸೀತಾರಾಂ ಅವರು ಬಹುಮುಖ ಪ್ರತಿಭೆ. ರಾಮಕೃಷ್ಣ ಹೆಗಡೆಯವರ ಆಪ್ತರಾಗಿರುವವರು. ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯರಾಗಿದಿದ್ದರೆ, ಶಾಸಕರಾಗುವ ಸಾಧ್ಯತೆಯೂ ಇತ್ತು. ರಾಮಕೃಷ್ಣ ಹೆಗಡೆಯವರಿಗೆ ಬಹಳ ಜನಪ್ರಿಯತೆ ಇದ್ದ ಕಾರಣ, ಜನತಾ ಪಾರ್ಟಿ ಪರವಾದ ಅಲೆ ಇತ್ತು.ಮತ್ತೊಬ್ಬರ ಚಾರಿತ್ರ್ಯ ಪ್ರಶ್ನಿಸುವವರೆಲ್ಲಾ ಸಾಚಾಗಳಾ…?

ನೆನಪಿನ ಪುಟಗಳ ಪುಸ್ತಕವನ್ನು ಉತ್ತಮವಾಗಿ ಹಾಗೂ ಸತ್ಯವನ್ನೇ ಬರೆದಿದ್ದಾರೆ. ನನ್ನ ಉತ್ತಮ ಸ್ನೇಹಿತರಾಗಿರುವ ಟಿ.ಎನ್.ಸೀತಾರಾಂ ಅವರು ಬರೆದಿರುವ ಕೃತಿಯನ್ನುಅತ್ಯಂತ ಸಂತೋಷದಿಂದ ಬಿಡುಗಡೆ ಮಾಡಿರುವುದಾಗಿ ತಿಳಿಸಿದರು.

Team Newsnap
Leave a Comment

Recent Posts

ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ

ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More

May 14, 2024

ರೇವಣ್ಣ ರಿಲೀಸ್ : ಬಿಗ್ ರಿಲೀಪ್

ಐದು ದಿನಗಳ ಜೈಲು ವಾಸಕ್ಕೆ ಅಂತ್ಯ ⁠5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More

May 13, 2024

ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ

ಬೆಂಗಳೂರು : ಪ್ರಜ್ವಲ್‌ ರೇವಣ್ಣ ವಿಚಾರದ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್‌ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್‌ನಲ್ಲಿ ಸಂತ್ರಸ್ತೆ… Read More

May 13, 2024

ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್

ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More

May 13, 2024

CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More

May 13, 2024

ರಾಜ್ಯದಾದ್ಯಂತ ಮುಂದಿನ 5 ದಿನ ಭಾರಿ ಮಳೆ

ಬೆಂಗಳೂರು : ಮುಂದಿನ 5 ದಿನ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ… Read More

May 13, 2024