ಸರ್ಕಾರಿ ಕಚೇರಿಗಳಲ್ಲಿ ಫೋಟೋ, ವಿಡಿಯೋ ಚಿತ್ರೀಕರಣ ನಿಷೇಧ ತಡರಾತ್ರಿ ಆದೇಶ ವಾಪಸ್

Team Newsnap
1 Min Read

ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಪೋಟೊ ವಿಡಿಯೋ ಮಾಡದಂತೆ ನಿನ್ನೆ ಹೊರಡಿಸಿದ್ದ ಆದೇಶವನ್ನು ಸರ್ಕಾರ ನಿನ್ನೆ ತಡರತ್ರಯೇ ವಾಪಸ್ ಪಡೆದಿದೆ.

ಸರ್ಕಾರದ ಈ ನಿರ್ಧಾರಕ್ಕೆ ಸಾರ್ವಜನಿಕರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ತನ್ನ ಆದೇಶವನ್ನು ವಾಪಸ್ ಪಡೆದಿದೆ.ಇದನ್ನು ಓದಿ -ದ್ರೌಪದಿ ಮುರ್ಮು ಅವರನ್ನು ಬೆಂಬಲಿಸಲು ಜೆಡಿಎಸ್​ ನಿರ್ಣಯ

ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗೆ ಆಗಮಿಸುವುದು ಸಾಮಾನ್ಯ. ಈ ಸಂದರ್ಭದಲ್ಲಿ ಕೆಲವು ಖಾಸಗಿ ವ್ಯಕ್ತಿಗಳು ತೆಗೆಯುವ ಫೋಟೋ ಅಥವಾ ವಿಡಿಯೋಗಳು ಸಾಮಾಜಿಕವಾಗಿ ದುರ್ಬಳಕೆ ಆಗುತ್ತಿವೆ.

ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರಿ ಕಚೇರಿಗಳಲ್ಲಿ ತೆಗೆದ ಫೋಟೋ ಇಲ್ಲವೇ ವಿಡಿಯೋ ಹರಿಬಿಡುತ್ತಾರೆ. ಇದರಿಂದ ಸರ್ಕಾರದ ಘನತೆಗೆ ಧಕ್ಕೆ ಉಂಟಾಗುತ್ತದೆ.


ಹೀಗಾಗಿ ಸರ್ಕಾರಿ ಎಲ್ಲಾ ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ವಿಡಿಯೋ ಮಾಡುವುದು ಇಲ್ಲವೇ ಫೋಟೊ ತೆಗೆಯುವುದನ್ನು ನಿಷೇಧಿಸಬೇಕು ಎಂದು ರಾಜ್ಯ ನೌಕರರ ಸಂಘದ ರಾಜ್ಯಾಧ್ಯಕ್ಷರು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು.

ಈ ಮನವಿಯನ್ನು ಪುರಸ್ಕರಿಸಿ ಸರ್ಕಾರ ಹೊಸ ಆದೇಶ ಹೊರಡಿಸಿತ್ತು. ಇದಕ್ಕೆ ಸಾರ್ವಜನಿಕರಿಂದ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಆದೇಶ ಹಿಂದಕ್ಕೆ ಪಡೆಯಲಾಗಿದೆ.

Share This Article
Leave a comment