ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಡಿ.ವೈ.ಎಸ್.ಪಿ. ವಿಜಯಲಕ್ಷ್ಮಿಗೆ ನ್ಯಾಯಾಲಯ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 4 ವರ್ಷಗಳ ಕಾಲ ಜೈಲು ವಿಧಿಸಿದೆ.
ವಿಜಯಲಕ್ಷ್ಮಿಗೆ 4 ವರ್ಷ ಸಜೆ ವಿಧಿಸಿ ಕಲಬುರ್ಗಿ ಜಿಲ್ಲಾ ವಿಶೇಷ ಸತ್ರ ನ್ಯಾಯಾಧೀಶ ಆರ್.ಜೆ.ಸತೀಶಸಿಂಗ್ ಈ ತೀರ್ಪು ನೀಡಿದ್ದಾರೆ.
ಶಿಕ್ಷೆಗೆ ಗುರಿಯಾಗಿರೋ ವಿಜಯಲಕ್ಷ್ಮಿ ಈ ಹಿಂದೆ ಶಹಾಬಾದ್ ನಗರ ಠಾಣೆ
ಇನ್ ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸಿದ್ದರು. 2015ರ ಡಿಸೆಂಬರ್ ನಲ್ಲಿ ವಿಜಯಲಕ್ಷ್ಮಿ ಲೋಕಾಯುಕ್ತ ಬಲೆಗೆ ಬಿದ್ದಿದ್ದರು.
ಪ್ರಕರಣ ಏನು?
ಶಹಾಬಾದ್ ತಾಲೂಕಿನ ದೇವನತೆಗನೂರು ಬಳಿಯ ಪೆಟ್ರೋಲ್ ಬಂಕ್ ನಲ್ಲಿ ವಾಹನಕ್ಕೆ ಡೀಸೆಲ್ ಹಾಕಿಸಲು ಹೋದ ಸಂದರ್ಭದಲ್ಲಿ ಬಂಕ್ ಸಿಬ್ಬಂದಿ ಜೊತೆಗೆ ರಾಜು ಎಂಬಾತ ಜಗಳವಾಡಿದ್ದ. ಈ ಹಿನ್ನೆಲೆಯಲ್ಲಿ ಬಂಕ್ ಮಾಲೀಕರು ರಾಜು ವಿರುದ್ಧ ಪ್ರಕರಣ ದಾಖಲಿಸಿದ್ದರು. ಆರೋಪಿ ವಿರುದ್ಧ ಕ್ರಮ ಜರುಗಿಸಲು ಲಂಚ ಕೇಳಿದ್ದರು ಎಂಬ ಆರೋಪ ಸಾಬೀತಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು