ವಿಧಾನ ಪರಿಷತ್‌ನ ಪ್ರಶ್ನೋತ್ತರ ಅಧಿವೇಶನದಲ್ಲಿ ಕಾಂಗ್ರೆಸ್ ಸದಸ್ಯ ಅಬ್ದುಲ್ ಜಬ್ಬರ್ ಈ ಬಗ್ಗೆ ಪ್ರಶ್ನೆ ಮಾಡಿದಾಗ, ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದರು.
ಮುಜರಾಯಿ ದೇವಾಲಯಗಳ ಆಸ್ತಿ ರಕ್ಷಣೆ ಮತ್ತು ಇಂಡೀಕರಣ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು, 2023 ಮತ್ತು 2024ರಲ್ಲಿ ಒಟ್ಟು 11,498 ಎಕರೆ ಆಸ್ತಿಯನ್ನು ದೇವಾಲಯಗಳ ಹೆಸರಿಗೆ ಪಹಣಿ ಮೂಲಕ ಇಂಡೀಕರಿಸಲಾಗಿದೆ. ಇದಲ್ಲದೆ, 15,413 ಎಕರೆ ಆಸ್ತಿ ದೇವಾಲಯಗಳ ಹೆಸರಿನಲ್ಲಿ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.ಇದನ್ನು ಓದಿ –ಅಂಬರೀಶ್ ಆಸೆಯನ್ನು ಈಡೇರಿಸಿದ ರಾಕಿಂಗ್ ಸ್ಟಾರ್ ಯಶ್
ಇನ್ನು 20,000 ಎಕರೆ ದೇವಾಲಯಗಳ ಜಾಗ ಇಂಡೀಕರಣ ಮಾಡುವ ಅಗತ್ಯವಿದೆ. ಈ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಇನ್ನೊಂದು ವರ್ಷದಲ್ಲಿ ಬಾಕಿ ಉಳಿದ ದೇವಾಲಯಗಳ ಆಸ್ತಿಯನ್ನೂ ಪೂರ್ಣವಾಗಿ ಇಂಡೀಕರಣ ಮಾಡಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು