ಕೃಷಿ ಕೂಲಿಕಾರರ ಕಲ್ಯಾಣ ನಿಧಿ ಸ್ಥಾಪನೆಗೆ ಆಗ್ರಹಿಸಿ ಮಂಡ್ಯದಲ್ಲಿ ಪ್ರತಿಭಟನೆ

Team Newsnap
2 Min Read

ಕೃಷಿ ಕೂಲಿಕಾರರ ಹಿತಕಾಪಾಡುವ ಸಮಗ್ರ ಕಾನೂನು ರಚನೆ ಹಾಗೂ ಕೃಷಿ ಕಾರ್ಮಿಕರ ಕಲ್ಯಾಣ ನಿಧಿ ಸ್ಥಾಪಿಸುವ ನಿರ್ಧಾರವನ್ನು ರಾಜ್ಯ ಸರ್ಕಾರದ ಬಜೆಟ್ ನಲ್ಲಿ ಘೋಷಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಮಂಡ್ಯ ನಗರದಲ್ಲಿ ಪ್ರತಿಭಟನೆ ನಡೆಸಿತು

ಸಿಲ್ವರ್ ಜ್ಯುಬಿಲಿ ಪಾರ್ಕಿನಿಂದ ಕೃಷಿ ಕೂಲಿಕಾರರು ಮೆರವಣಿಗೆ ಹೊರಟು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಧರಣಿ ನಡೆಸಿ ಮನವಿ ಸಲ್ಲಿಸಿದರು.

ಕೇರಳ,ತ್ರಿಪುರ.ತಮಿಳುನಾಡು ರಾಜ್ಯದಲ್ಲಿ ಕೃಷಿ ಕೂಲಿಕಾರರು ಗ್ರಾಮೀಣ ಪ್ರದೇಶದ ಕೆಲಸಗಾರರಿಗೆ ಕನಿಷ್ಠ ವೇತನ. ತುಟ್ಟಿಭತ್ಯೆ, ಭವಿಷ್ಯ ನಿಧಿ,ಇ ಎಸ್ ಐ ಹಾಗೂ ನಿವೃತ್ತಿ ವೇತನ ನೀಡುವ ಸಮಗ್ರ ಕಾನೂನು ಜಾರಿಯಲ್ಲಿದ್ದು.ಅದೇ ಮಾದರಿಯಲ್ಲಿ ರಾಜ್ಯದಲ್ಲಿಯೂ ಕಾನೂನು ರೂಪಿಸಲು ಬಜೆಟ್ ನಲ್ಲಿ ಘೋಷಿಸಬೇಕು ಎಂದು ಒತ್ತಾಯಿಸಿದರು

ಕೃಷಿ ಕೂಲಿ ಕಾರ್ಮಿಕರ ಕಲ್ಯಾಣ ನಿಧಿ ಸ್ಥಾಪಿಸಲು ಮುಂದಾಗಬೇಕು ಅಲ್ಲಿಯವರೆಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ನೀಡಲಾಗುವ ಸೌಲಭ್ಯವನ್ನು ಕೃಷಿ ಕೂಲಿಕಾರರಿಗೆ ನೀಡಬೇಕು.ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಎಲ್ಲಾ ಗ್ರಾಮಗಳಿಗೆ ವಿಸ್ತರಿಸಿ ಭ್ರಷ್ಟಾಚಾರ ಮುಕ್ತವಾಗಿ ಅನುಷ್ಠಾನಗೊಳಿಸಬೇಕು. ಕೆಲಸ ನೀಡಲಾಗದ ದಿನಗಳಲ್ಲಿ ನಿರುದ್ಯೋಗ ಭತ್ಯೆ ನೀಡಬೇಕು.ವಾರ್ಷಿಕ 200 ದಿನ ಕೆಲಸ ನೀಡಿ ದಿನಕ್ಕೆ 600 ರೂ ವೇತನ ನೀಡಬೇಕು ಎಂದು ಒತ್ತಾಯಿಸಿದರು

ವಸತಿ ರಹಿತ ಕೂಲಿ ಕಾರ್ಮಿಕರಿಗೆ ನಿವೇಶನ.ವಸತಿ ಕಲ್ಪಿಸಲು ಭೂಸ್ವಾಧೀನಕ್ಕೆ ಬಜೆಟ್ ನಲ್ಲಿ ಅನುದಾನ ಮೀಸಲಿರಿಸಬೇಕು. ಸರ್ಕಾರಿ ಜಾಗಗಳಲ್ಲಿ ಬಡ ಜನತೆ ನಿರ್ಮಾಣ ಮಾಡಿರುವ ಮನೆಗಳನ್ನು ಸಕ್ರಮಗೊಳಿಸಬೇಕು.

ಕೃಷಿ ಕೂಲಿಕಾರ ಕುಟುಂಬಗಳಿಗೆ ಷರತ್ತು ವಿಧಿಸದೆ ಬಿಪಿಎಲ್ ಕಾರ್ಡ್ ವಿತರಿಸಬೇಕು.

ಪಡಿತರದಲ್ಲಿ ಅಕ್ಕಿ ವಿತರಣೆ ಬದಲಾಗಿ ಹಣ ನೀಡುವ ಚಿಂತನೆ ಕೈಬಿಡಬೇಕು.ಅಕ್ಕಿ ಜೊತೆಗೆ ಜೋಳ.ರಾಗಿ. ಸೀಮೆಎಣ್ಣೆ.ಬೆಲ್ಲ ವಿತರಿಸಬೇಕು ಎಂದು ಆಗ್ರಹಿಸಿದರು.

ಕೃಷಿ ಕೂಲಿಕಾರರಿಗೆ ಉಪಕಸುಬು ಗಾಗಿ ಸಬ್ಸಿಡಿ ಸಾಲವನ್ನು ಶೇ 1 ರ ದರದಲ್ಲಿ 2 ಲಕ್ಷ ಸಾಲ ನೀಡಬೇಕು. ವಸತಿಗಳಿಗೆ ಉಚಿತ ವಿದ್ಯುತ್ ಪೂರೈಕೆ ಮಾಡಬೇಕು. 2000 ಮಾಸಿಕ ನಿವೃತ್ತಿ ವೇತನ ನೀಡಬೇಕು.

ವಲಸೆ ಕಾರ್ಮಿಕರ ಕಾಯ್ದೆ ಪರಿಷ್ಕರಿಸಿ ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಅವರಿಗೆಸೂಕ್ತ ಪರಿಸರದಲ್ಲಿ ವಸತಿ ಸೌಲಭ್ಯ ಕಲ್ಪಿಸಬೇಕು. ಬಡವರ ಬಗರ್ ಹುಕುಂ ಸಾಗುವಳಿ ಪ್ರಕರಣ ಸಕ್ರಮ ತ್ವರಿತ ಗೊಳಿಸಬೇಕು. ಐದು ಎಕರೆ ಒಳಗಿನ ಭೂರಹಿತ ಬಗರ್ ಹುಕುಂ ಸಾಗುವಳಿದಾರ ರನ್ನ ಕಂದಾಯ.ಅರಣ್ಯ ಭೂಮಿಯಿಂದ ಒಕ್ಕಲೆಬ್ಬಿಸಬಾರದು.

ಕೃಷಿ ಮಾಡಲು ಬಯಸುವ ದಲಿತರು ಹಾಗೂ ದೇವದಾಸಿ ಮಹಿಳೆಯರಿಗೆ ತಲಾ ಎರಡು ಎಕರೆ ಕೃಷಿ ಭೂಮಿ ನೀಡಬೇಕು.ಪ್ರತಿ ಹಳ್ಳಿಗಳಿಗೂ ಸ್ಮಶಾನ ಸೌಲಭ್ಯ ಕಲ್ಪಿಸಬೇಕು. ಕೃಷಿ ಕೂಲಿಕಾರರಿಗೆ ಕೋರೋನ ಲಸಿಕೆ.ವೈದ್ಯಕೀಯ ಚಿಕಿತ್ಸೆಯನ್ನು ಉಚಿತವಾಗಿ ನೀಡಬೇಕು. ಸರ್ಕಾರಿ ವಿದ್ಯಾರ್ಥಿನಿಲಯಗಳಲ್ಲಿ ಮಕ್ಕಳ ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಬೇಕು. ಕೂಲಿಕಾರ ಮಕ್ಕಳ ಪ್ರವೇಶಕ್ಕೆ ಅನುಕೂಲವಾಗಲು ವಿದ್ಯಾರ್ಥಿ ನಿಲಯಗಳ ಪ್ರಮಾಣವನ್ನು ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

ಸಂಘದ ಜಿಲ್ಲಾಧ್ಯಕ್ಷ ಎಂ ಪುಟ್ಟ ಮಾದು.ಪ್ರಧಾನ ಕಾರ್ಯದರ್ಶಿ ಬಿ ಹನುಮೇಶ್.ಮುಖಂಡರಾದ ಕೆ ಹನುಮೇಗೌಡ.ಬಿ ಎಂ ಶಿವ ಮಲ್ಲಯ್ಯ.ಸರೋಜಮ್ಮ. ಅನಿತಾ.ಅಜಯ್ ಕೆ ಆರ್. ರಾಮಣ್ಣ. ಕೆ ಬಸವರಾಜು. ಎನ್ ಸುರೇಂದ್ರ.ಶಿವಮೂರ್ತಿ.ಅಮಾಸ ಯ್ಯ ನೇತೃತ್ವ ವಹಿಸಿದ್ದರು.

Share This Article
Leave a comment