ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ

Team Newsnap
1 Min Read

ಕೇಂದ್ರ ಸರ್ಕಾರವು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡುತ್ತಿರುವುದನ್ನು ಖಂಡಿಸಿ ಮೈಸೂರಿನ ಗಾಂಧಿಚೌಕ ವೃತ್ತದಲ್ಲಿ ಟಾಂಗಾ ಏರುವ ಮೂಲಕ ಮೈಸೂರು ಸಮಾನ ಮನಸ್ಕರ ವೇದಿಕೆಯು ವಿನೂತನವಾಗಿ ಪ್ರತಿಭಟನೆ ನಡೆಸಿತು‌.

ನೆರೆದಿದ್ದ ಪ್ರತಿಭಟನಾಕಾರರು ಟಾಂಗಾ ಗಾಡಿ ಏರಿ ಕೇಂದ್ರ ಸರ್ಕಾರದ ವಿರುದ್ದ ವಿವಿಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

ಕೇಂದ್ರ ಸರ್ಕಾರವು ದಿನದಿಂದ ದಿನಕ್ಕೆ ಪೆಟ್ರೋಲ್, ಡೀಸೆಲ್, ಗ್ಯಾಸ್ ಹಾಗೂ ದಿನನಿತ್ಯದ ಪದಾರ್ಥಗಳ ಬೆಲೆ ಏರಿಕೆ ಮಾಡುತ್ತಿರುವ ಪರಿಣಾಮ ಸಾರ್ವಜನಿಕರಿಗೆ ಗಾಯದ ಮೇಲೆ ಬರೆ ಹಾಕಿದಂತಾಗುತ್ತಿದೆ. ಗಗನಕ್ಕೇರುತ್ತಿರುವ ಬೆಲೆಯಿಂದ ಜನರು ಕಂಗಾಲಾಗಿದ್ದಾರೆ. ಕೇಂದ್ರ ಸರ್ಕಾರ ಬೆಲೆ ಏರಿಕೆ ಕ್ರಮವನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕ್ ಉಪಾಧ್ಯಕ್ಷ ಪಡುವಾರಹಳ್ಳಿ ಎಂ.ರಾಮಕೃಷ್ಣ ವೇದಿಕೆ ಸಂಚಾಲಕ ಒಂಟಿಕೊಪ್ಪಲ್ ಗುರುರಾಜ್, ಜೆ.ಯೋಗೇಶ್, ಸಿ.ರೇವಣ್ಣ, ವಿ.ಮಧು, ಎಸ್.ಆರ್ ರವಿಕುಮಾರ್ ಸೇರಿದಂತೆ ಇನ್ನಿತರರು ಇದ್ದರು.

Share This Article
Leave a comment