PSI ಪರೀಕ್ಷೆ ಅಕ್ರಮ : ಹಾಸನ ಜಿಲ್ಲೆಯ ಮೂವರು CID ವಶಕ್ಕೆ

Team Newsnap
1 Min Read
PSI scam: Rudragowda Patil escapes from CID officials ಪಿಎಸ್ ಐ ಹಗರಣ: ರುದ್ರಗೌಡ ಪಾಟೀಲ್ CID ಅಧಿಕಾರಿಗಳಿಂದ ಎಸ್ಕೇಪ್

PSI ನೇಮಕಾತಿ ಹಗರಣ ವಾಸನೆ ಹಾಸನ ಜಿಲ್ಲೆಗೂ ಹಬ್ಬಿದೆ. PSI ಪರೀಕ್ಷೆ ಬರೆದು ತೇರ್ಗಡೆ ಹೊಂದಿದ್ದ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ, ಹಾಸನ, ಹೊಳೆನರಸೀಪುರ ಸೇರಿದ ಒಟ್ಟು ಮೂವರು ಅಭ್ಯರ್ಥಿಗಳನ್ನು ಸಿಐಡಿ ಪೊಲೀಸರು ವಶಕ್ಕೆ ಪಡೆದ್ದಾರೆ.

ಕೇವಲ ಅಭ್ಯರ್ಥಿಗಳು ಮಾತ್ರವಲ್ಲದೇ, ಬೆಕ್ಕ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಕೇಶವಮೂರ್ತಿ ಸೇರಿದಂತೆ ಮೂವರು ಸ್ಥಳೀಯ ರಾಜಕಾರಣಿಗಳನ್ನು ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಜೆಡಿಎಸ್‌ನಲ್ಲಿ ಗುರುತಿಸಿಕೊಂಡಿದ್ದು, ಇತ್ತೀಚೆಗೆ ಬಿಜೆಪಿಯ ಜೊತೆಯು ಉತ್ತಮ ಸಂಪರ್ಕ ಹೊಂದಿದ್ದರು ಎನ್ನಲಾಗಿದೆ. 

ಈ ಸಂಬಂಧ ಪ್ರತಿಕ್ರಿಯಿಸಿರುವ ಶಾಸಕ ಸಿ.ಎನ್.ಬಾಲಕೃಷ್ಣ, ಈ ಹಗರಣದಲ್ಲಿ ಎಲ್ಲರೂ ಒಂದಲ್ಲ ಒಂದು ಪಕ್ಷದಲ್ಲಿ ಗುರುತಿಸಿಕೊಂಡಿರುತ್ತಾರೆ. ಯಾವುದೇ ಪಕ್ಷ ಇಂತಹ ಕೆಲಸ ಮಾಡಿ ಅಂತ ಹೇಳಲ್ಲ. ಜನಪ್ರತಿನಿಧಿಗಳಾಗಿ ಒಳ್ಳೆಯ ಕೆಲಸ ಮಾಡಿ ಅಂತ ಹೇಳುತ್ತೆ. ಇದು ಅವರವರು ಮಾಡಿರುವಂತಹ ವೈಯಕ್ತಿಕ ತಪ್ಪುಗಳು. ತಪ್ಪು ಯಾರು ಮಾಡಿದರೂ ತಪ್ಪೇ. ಇದರಿಂದ ಪ್ರಾಮಾಣಿಕವಾಗಿ ಪರೀಕ್ಷೆ ಬರೆದಿರುವವರಿಗೆ ನ್ಯಾಯ ಒದಗಿಸಬೇಕು ಎಂದು ಹೇಳಿದ್ದಾರೆ.

Share This Article
Leave a comment