Main News

PSI ಪರೀಕ್ಷಾ ಅಕ್ರಮ : DYSP ಸಾಲಿ ಬಂಧನ – ನೇಮಕಾತಿ ವಿಭಾಗದ ಅಧಿಕಾರಿಗಳ ವಿಚಾರಣೆ

PSI ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ರಾಯಚೂರು ಜಿಲ್ಲೆಯ ಲಿಂಗಸೂರು ಡಿವೈಎಸ್​ಪಿ ಮಲ್ಲಿಕಾರ್ಜುನ ಸಾಲಿ ವಿಚಾರಣೆ ನಡೆಸಿ ಬಳಿಕ ಬಂಧಿಸಿದೆ. ಪಿಎಸ್​ಐ ಅಕ್ರಮದ ತನಿಖೆಯ ಸುಳಿ ಸದ್ಯ ನೇಮಕಾತಿ ವಿಭಾಗದ ಹೊಸ್ತಿಲಿಗೆ ಬಂದು ನಿಂತಿದೆ.

ನೇಮಕಾತಿ ಮುಖ್ಯಸ್ಥರು, ಇತರ ಸಿಬ್ಬಂದಿ ವಿಚಾರಣೆಗೆ ನಿರ್ಧರಿಸಲಾಗಿದೆ ಎಡಿಜಿಪಿ ಅಮೃತ್ ಪೌಲ್, ಡಿಎಸ್​ಪಿ ಶಾಂತಕುಮಾರ್ ಸೇರಿ 42 ಸಿಬ್ಬಂದಿ ವಿಚಾರಣೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ನೇಮಕಾತಿ ವಿಭಾಗದ ಅಧಿಕಾರಿಗಳು ಬೆಂಗಳೂರು ಬಿಟ್ಟು ಎಲ್ಲಿಯ ತೆರಳುವಂತಿಲ್ಲ ಎಂದು ಸಿಐಡಿ ಸೂಚನೆ ನೀಡಿದೆ.

ಪಿಎಸ್​ಐ ಪರೀಕ್ಷೆ ಅಕ್ರಮ, ಭ್ರಷ್ಟಾಚಾರದ ಕಡಲಿನಂತಾಗಿದೆ. ತನಿಖೆ ತೀವ್ರಗೊಂಡಂತೆ ಹೊಸ ಹೊಸ ಅಕ್ರಮ, ಅಕ್ರಮದ ಹಿಂದಿನ ಸೂತ್ರಧಾರಿಗಳು ಬಯಲಿಗೆ ಬರ್ತಿದ್ದಾರೆ. ಕಲಬುರಗಿಯಿಂದ ಬೆಂಗಳೂರಿನವರೆಗೂ ಹರಡಿರುವ ಅಕ್ರಮದ ಬೇರುಗಳ ಬೆನ್ನತ್ತಿದ ಸಿಐಡಿ ಪೊಲೀಸರ ತನಿಖೆ ಜಾಡು ಸದ್ಯ ಪೊಲೀಸರ ಬುಡಕ್ಕೆ ಬಂದು ನಿಂತಿದೆ.

ಪಿಎಸ್ಐ ಅಕ್ರಮದ ತನಿಖೆಯನ್ನು ಸಿಐಡಿ ಟೀಂ ಚುರುಕುಗೊಳಿಸಿದೆ, ಅಕ್ರಮದಲ್ಲಿ ಪೊಲೀಸರೇ ಭಾಗಿಯಾಗಿರುವುದು ಕಂಡುಬಂದಿದೆ. ಹೀಗಾಗಿ ಸದ್ಯದಲ್ಲೇ ನೇಮಕಾತಿ ವಿಭಾಗದ ಅಧಿಕಾರಿಗಳು ಹಾಗೂ ಇತರ ಸಿಬ್ಬಂದಿಯನ್ನು ವಿಚಾರಣೆ ನಡೆಸಲು ಸಿಐಡಿ ಸಿದ್ಧತೆ ಮಾಡಿಕೊಳ್ಳುತ್ತಿದೆ.

Team Newsnap
Leave a Comment
Share
Published by
Team Newsnap

Recent Posts

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024

ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು

ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More

May 4, 2024

ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್

ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More

May 4, 2024

ರೇವಣ್ಣ ಅಪಹರಣ ಕೇಸ್‌ : ಎಸ್‌ಐಟಿ ವಿಶೇಷ ತಂಡದಿಂದ 40 ಕಡೆ ರೇಡ್‌

ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್‌ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More

May 4, 2024