ನ್ಯಾಯಕೊಡಿಸದಿದ್ರೆ ಟೆರರಿಸ್ಟ್ಗಳ ಜೊತೆ ಕೈಜೋಡಿಸುತ್ತೇವೆ ಎಂದು ನೊಂದ ಪಿಎಸ್ಐ (PSI) ಅಭ್ಯರ್ಥಿಗಳು ಪ್ರಧಾನಿ ನರೇಂದ್ರಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ರಕ್ತದಲ್ಲಿ ಎರಡು ಪುಟಗಳ ಪತ್ರ ಬರೆದು ನ್ಯಾಯ ಓದಗಿಸುವಂತೆ ಅವರು ಮನವಿ ಮಾಡಿ ಪರೀಕ್ಷೆ ಆಯ್ಕೆಯಲ್ಲಿ ಮೋಸ ಹೋದವರಿಗೆ ನ್ಯಾಯ ಸಿಗಬೇಕು. ಪಿಎಸ್ಐ ಪರೀಕ್ಷೆಯಲ್ಲಿ ಅನ್ಯಾಯ ಮಾಡಿದವರನ್ನು ಜೈಲಿಗೆ ಹಾಕಬೇಕು ಎಂದು ಒತ್ತಾಯ ಮಾಡಿದ್ದಾರೆ.
ಇದನ್ನು ಓದಿ : ಕಾಶ್ಮೀರ TO ಕನ್ಯಾಕುಮಾರಿ ಭಾರತ್ ಜೋಡೋ ಯಾತ್ರೆ: ಕಾಂಗ್ರೆಸ್ ಸಂಕಲ್ಪ
ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳು ಹಣ ಇದ್ದವರಿಗೆ ಮಾತ್ರ ಎನ್ನುವ ಪರಿಸ್ಥಿತಿಯಿದೆ. ಸರ್ಕಾರದ ಈ ವ್ಯವಸ್ಥೆಯಿಂದ ಮಾನಸಿಕವಾಗಿ ಸತ್ತುಹೋಗಿದ್ದೇವೆ.ಇನ್ಮುಂದೆ ಸರ್ಕಾರಿ ಹುದ್ದೆ ಪರೀಕ್ಷೆಗಳನ್ನು ಬರೆಯಲಾಗುವುದಿಲ್ಲ. ಟೆರೆರಿಸ್ಟ್ಗಳ ಜೊತೆ, ನಕ್ಸಲ್ ಸಂಘಟನೆ ಸೇರಲು ಇಚ್ಛಿಸಿದ್ದೇವೆ. ಅವರಿಂದ ಹಣ ಪಡೆದು ಬಡ ಕುಟುಂಬಕ್ಕೆ ಸಹಾಯ ಮಾಡುತ್ತೇವೆ ಎಂದು ಹೇಳಿ ನಾವು 8 ಮಂದಿ ಇದ್ದೇವೆ, ನಾವೆಲ್ಲಾ ಈ ನಿರ್ಧಾರ ಮಾಡಿದ್ದೀವಿ ಎಂದು ನೊಂದ ಪಿಎಸ್ಐ ಅಭ್ಯರ್ಥಿಗಳಿಂದ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ