ಪೊಲೀಸ್ ಸಬ್ ಇನ್ಸ್ ಪೆಕ್ಟರ್ (PSI) ನೇಮಕಾತಿಯಲ್ಲಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್‍ಐ ಮರು ಪರೀಕ್ಷೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಮುಂದಿನ ವಿಚಾರಣೆಯ ತನಕ ಮರುಪರೀಕ್ಷೆ ದಿನಾಂಕ ಪ್ರಕಟಿಸದೆ ಸೂಚನೆ ನೀಡಿದೆ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಪಿಎಸ್‍ಐ ಕೇಸ್‍ನಲ್ಲಿ ಆರೋಪಿತ ಎಡಿಜಿಪಿ ಅಮೃತ್ ಪೌಲ್ ವಿರುದ್ಧ ಹೆಚ್ಚುವರಿ ಚಾರ್ಜ್‍ಶೀಟ್ ಸಲ್ಲಿಕೆ ಆಗಿದೆ. 1,406 ಪುಟಗಳ ಹೆಚ್ಚುವರಿ ಚಾರ್ಟ್‍ಶೀಟ್ ಅನ್ನು ಸಿಐಡಿ ಸಲ್ಲಿಸಿದೆ.
545 ಪಿಎಸ್‍ಐ ಹುದ್ದೆಗಳ ಡೀಲ್ ನಡೆದಾಗ ಅಮೃತ್ ಪೌಲ್ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದರು. ಡಿವೈಎಸ್‍ಪಿ ಹಾಗೂ ಎಫ್‍ಡಿಎಯೊಂದಿಗೆ ಸೇರಿ ಅಮೃತ್ ಪೌಲ್ ಡೀಲ್ ಮಾಡಿಸಿದ್ದಾರೆ ಎಂಬ ಆರೋಪವಿದೆ. ಮೈಸೂರು ದಸರಾ – ಮನೆ ಮನಗಳಲ್ಲಿ ಗೊಂಬೆಗಳ ಸಡಗರ
ಬಂಧನಕ್ಕೆ ಒಳಗಾದ ಆರೋಪಿಗಳ ವಿಚಾರಣೆ ವೇಳೆ ಕೆಲವರು ಅಮೃತ್ ಪೌಲ್ ಹೆಸರನ್ನು ಬಾಯಿಬಿಟ್ಟಿದ್ದಾರೆ ಎನ್ನಲಾಗಿದೆ. ಈ ಹಿಂದೆ ನಾಲ್ಕು ಬಾರಿ ವಿಚಾರಣೆ ನಡೆಸಿದ್ದ ಸಿಐಡಿ ಮತ್ತೆ ವಿಚಾರಣೆಗೆ ಕರೆದಿತ್ತು. ಇಂದು ವಿಚಾರಣೆ ನಡೆಸಿದ ಬಳಿಕ ಮತ್ತಷ್ಟು ಮಾಹಿತಿ ಕಲೆ ಹಾಕಲು ಅಮೃತ್ ಪೌಲ್ ಅವರನ್ನು ಬಂಧಿಸಿದೆ.
More Stories
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಐದು ಷರತ್ತು
ಒಡಿಶಾ ರೈಲು ಅಪಘಾತ: ಸಿಬಿಐ ತನಿಖೆಗೆ ಶಿಫಾರಸ್ಸು -ಕೇಂದ್ರ ರೈಲ್ವೆ ಸಚಿವ ಪ್ರಕಟ
ಪಿಯು ಕಾಲೇಜು 4055 ಅತಿಥಿ ಉಪನ್ಯಾಸಕರ ನೇಮಕಾತಿಗೆ ಸಮ್ಮತಿ