PSI ನೇಮಕಾತಿ ಅಕ್ರಮ: ಪರೀಕ್ಷೆ ಬರೆದಿದ್ದ 9 ಅಭ್ಯರ್ಥಿಗಳ ಬಂಧನ

Team Newsnap
1 Min Read
PSI scam: Rudragowda Patil escapes from CID officials ಪಿಎಸ್ ಐ ಹಗರಣ: ರುದ್ರಗೌಡ ಪಾಟೀಲ್ CID ಅಧಿಕಾರಿಗಳಿಂದ ಎಸ್ಕೇಪ್

ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬೆಂಗಳೂರಿನ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದ 9 ಅಭ್ಯರ್ಥಿಗಳನ್ನು ಹೈಗ್ರೌಂಡ್ ಪೋಲಿಸರು ಬಂಧಿಸಿದ್ದಾರೆ.

ಬೆಂಗಳೂರಿನ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದ 22 ಅಭ್ಯರ್ಥಿಗಳ ಓಎಂಆರ್ ಶೀಟ್‌ನಲ್ಲಿ ವ್ಯತ್ಯಾಸ ಕಂಡು ಬಂದಿತ್ತು.

ಅಂತಹ ಅಭ್ಯರ್ಥಿಗಳ ವಿರುದ್ಧ ಸಿಐಡಿ ಅಧಿಕಾರಿಗಳು ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಈ ದೂರಿನ ಆಧಾರದ ಮೇರೆಗೆ ಎಫ್‌ಐಆರ್ ದಾಖಲಿಸಿಕೊಂಡ ಹೈಗ್ರೌಂಡ್ಸ್ ಪೊಲೀಸರು ಸದ್ಯ 9 ಅಭ್ಯರ್ಥಿಗಳನ್ನು ಬಂಧಿಸಿದ್ದಾರೆ. ಉಳಿದ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಹೈಗ್ರೌಂಡ್ಸ್ ಪೊಲೀಸರಿಂದ ಬಂಧನಕ್ಕೊಳಗಾದ ಅಭ್ಯರ್ಥಿಗಳನ್ನು ಸದ್ಯದಲ್ಲೇ ಸಿಐಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆಗಳಿವೆ.

ಸಿಐಡಿ ವಿಚಾರಣೆ ಬಳಿಕವೇ ಈ ಅಭ್ಯರ್ಥಿಗಳು ಯಾವ ರೀತಿಯಲ್ಲಿ ಲಾಬಿ ಮಾಡಿದ್ದಾರೆ? ಇವರಿಗೆ ಸಹಕಾರ ನೀಡಿದವರು ಯಾರು? ಎಂಬ ಬಗ್ಗೆ ಮಾಹಿತಿ ಬೆಳಕಿಗೆ ಬರಲಿದೆ.

2ನೇ ಎಫ್​ಐಆರ್: ಪಿಎಸ್‌ಐ ಅಕ್ರಮದ ಕುರಿತು ಕಲಬುರಗಿಯ ಚೌಕ್ ಠಾಣೆಯಲ್ಲಿ ಮೊದಲ ಎಫ್‌ಐಆರ್ ದಾಖಲಾಗಿತ್ತು. ಹೈಗ್ರೌಂಡ್ಸ್ ಠಾಣೆಯಲ್ಲಿ ಎರಡನೇ ಎಫ್‌ಐಆರ್ ದಾಖಲಾಗಿದೆ.

Share This Article
Leave a comment